ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು

ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೆಸಿ ರೋಡ್ನಿಂದ ಬರುತ್ತಿದ್ದ ರಿಕ್ಷಾ ಮತ್ತು ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮಧ್ಯೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ರಿಕ್ಷಾ ನಜ್ಜುಗುಜ್ಜಾಗಿದೆ.

ಅಪಘಾತದ ಬಳಿಕ ಬಸ್ ಹಿಂದೆ ಚಲಿಸಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೂ ಹರಿದಿದ್ದು, ಅಲ್ಲದೆ ಅಲ್ಲೆ ನಿಲ್ಲಿಸಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಆ ರಿಕ್ಷಾ ಕೂಡಾ ಪಲ್ಟಿಯಾಗಿದೆ.
ಘಟನೆಯಲ್ಲಿ ಕೋಟೆಕಾರ್ ಅಜ್ಜಿನಡ್ಕದ ಒಂದೇ ಕುಟುಂಬದ ಐವರು ಮೃತರಾಗಿದ್ದರು. ಮೃತರನ್ನು ರಿಕ್ಷಾ ಚಾಲಕ ಹೈದರ್ ಆಲಿ (47), ಫರಂಗಿಪೇಟೆಯ ಅವ್ವಮ್ಮ, ಅಜ್ಜಿನಡ್ಕದ ಖತುಜಾ (60), ಹಸ್ನಾ, ನತೀಜಾ (52), ಆಯೆಶಾ (19) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
