ಶಿವಮೊಗ್ಗದಲ್ಲಿ ನಡೆದ ಗಲಾಟೆಯ ಹಿಂದೂ -ಮುಸ್ಲಿಂ ಗಲಾಟೆಯಾಗಿ ಬಿಂಬಿಸಲು ಯತ್ನಿಸಿತಾ ಬಿಜೆಪಿ?

ಶಿವಮೊಗ್ಗ, : ಮಲೆನಾಡು ಮತ್ತು ಕರಾವಳಿ ಭಾಗಗಳಾದ ಶಿವಮೊಗ್ಗ (Shivamogga), ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಕೋಮುಭಾವನೆಗೆ ಅತಿ ಸೂಕ್ಷ್ಮ ಜಿಲ್ಲೆಗಳೆಂದು ರಾಜ್ಯ ಸರ್ಕಾರ ಗುರುತಿಸಿದೆ. ಈ ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ತಡೆಗೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.

ಇದರ ನಡುವೆಯೇ ಒಂದು ಗಲಾಟೆಯನ್ನು ಹಿಂದೂ ಮುಸ್ಲಿಂ (Hindu And Muslim) ಜಗಳವೆಂದು ಬಿಂಬಿಸುವ ಯತ್ನ ಪಡೆದಿದೆ. ಹೌದು.. ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂಗಳ ನಡುವೆ ಗಲಾಟೆಯಾಗಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಬಿಜೆಪಿ ಕಾರ್ಯಕರ್ತರ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂದ ಬಿಜೆಪಿ ಕಾರ್ಯಕರ್ತ ಶಂಕರ್ ಎನ್ನುವಾತನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂದು ಪೊಲೀಸರು ದೂರು ನೀಡಿದ್ದಾರೆ.
ನಿನ್ನೆ (ಆಗಸ್ಟ್ 31) ಆಶ್ರಯ ಬಡಾವಣೆಯಲ್ಲಿ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಆದ್ರೆ, ಇದನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಶಂಕರ್ ಎನ್ನುವರು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಬಡವಾವಣೆ ಸ್ಥಳೀಯರು, ಬಿಜೆಪಿ ಕಾರ್ಯಕರ್ತ ಶಂಕರ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ತುಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.