Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಶಾಲನಗರದಲ್ಲಿ ₹7,000 ಕೆ.ಜಿ. ಕಾಫಿ ಕಳವು: ಮಾಲು ಸಹಿತ 5 ಆರೋಪಿಗಳ ಬಂಧನ

Spread the love

ಮಡಿಕೇರಿ: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಫಿ ವರ್ಕ್ಸ್ ಒಂದರಲ್ಲಿ ಸುಮಾರು 7 ಸಾವಿರ ಕೆ.ಜಿ. ಕಾಫಿ ಕಳವು ಮಾಡಿದ ಪ್ರಕರಣ ಭೇದಿಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಮಾಲು ಸಹಿತ 5 ಆರೋಪಿಗಳನ್ನು ಬಂಧಿಸಿದ್ದಾರೆ.

ಬೈಲುಕುಪ್ಪೆ ಗ್ರಾಮದ ಸುನಿಲ್ ಆರ್.(34), ರಾಜು ಆರ್.(24), ಶರತ್ ಆರ್ (24), ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ದಿನೇಶ್ ರಾವತ್(44) ಹಾಗೂ ಪೂರ್ವ ಚಂಪಾರಣ್ ಜಿಲ್ಲೆಯ ಜಿತೇಂದ್ರ ಕುಮಾರ್ ರಾಮ್(38) ಬಂಧಿತ ಆರೋಪಿಗಳು.

ಬಂಧಿತರಿಂದ 6,495 ಕೆ.ಜಿ. ಕಾಫಿ, 1 ಕಾರು , 2 ದ್ವಿಚಕ್ರ ವಾಹನ ಹಾಗೂ 1 ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುಶಾಲನಗರ ಕೂಡ್ಲೂರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ಉಮಾ ಕಾಫಿ ವರ್ಕ್ಸ್ ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಸಾವಿರ ಕೆ.ಜಿ. ಕಾಫಿ ಕಳ್ಳತನವಾಗಿರುವ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಚಂದ್ರಶೇಖರ್, ಕುಶಾಲನಗರ ವೃತ್ತದ ಸಿಪಿಐ ದಿನೇಶ್ ಕುಮಾರ್, ಗ್ರಾಮಾಂತರ ಪಿಎಸ್‌ಐ ರಾಮಚಂದ್ರ, ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಮಾಲು ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಬಿ.ಪಿ. ಶ್ಲಾಘಿಸಿದ್ದಾರೆ.

ಜಿಲೆಯಲ್ಲಿನ ಯಾವುದೇ ಕಾಫಿ ಟ್ರೇಡರ್ಸ್ ಅವರು ಕಾಫಿ ಖರೀದಿ ಸಂದರ್ಭ ರಶೀದಿ ಅಥವಾ ಬಿಲ್‌ನ್ನು ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಇಟ್ಟು ಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡು ಬಂದಲ್ಲಿ ಕಾಫಿ ಟ್ರೇರ‍್ಸ್ ಮಾಲೀಕರನ್ನು ನೇರ ಹೊಣೆಗಾರನ್ನಾಗಿ ಮಾಡಲಾಗುವುದೆಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *