ಹರಪನಹಳ್ಳಿಯಲ್ಲಿ ಬಸ್ ಹಳ್ಳಕ್ಕೆ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹರಪನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ ಸೆ.2ರ ಮಂಗಳವಾರ ಮಧ್ಯಾಹ್ನ ನಡೆದಿದೆ.

ದಾವಣಗೆರೆಯಿಂದ ಉಚ್ಚಂಗಿದರ್ಗ, ಮಾದಿಹಳ್ಳಿ ಮಾರ್ಗವಾಗಿ 28 ಜನ ಪ್ರಯಾಣಿಕರನ್ನು ತುಂಬಿಕೊಂಡು ಹರಪನಹಳ್ಳಿ ಕಡೆ ಹೊರಟ್ಟಿದ್ದ ಖಾಸಗಿ ಬಸ್ ನ ನಿಯಂತ್ರಣ ತಪ್ಪಿದ ಘಟನೆ ಅಣಜಿಗೆರೆ ಬಳಿಯಿರುವ ಸೇತುವೆ ಬಳಿ ಘಟನೆ ನಡೆದಿದೆ.
ಗಾಯಾಳುಗಳು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅರಸೀಕರೆ ಪೊಲೀಸ್ ಠಾಣೆ ಪಿಎಸ್‌ಐ ವಿಜಯಕೃಷ್ಣ ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಣಜಿಗೆರೆ ಬಳಿಯಿರುವ ಸೇತುವೆಗೆ ತಡೆ ಗೋಡೆ ಇಲ್ಲದ ಪರಿಣಾಮ ಈ ಘಟನೆ ಸಂಭವಿಸಿದೆ, ಮಳೆಗಾಲದಲ್ಲಿ ಹಳ್ಳಕ್ಕೆ ಹೆಚ್ಚಿನ ನೀರು ಹರಿದು ಬರುತ್ತದೆ ಸೇತುವೆ ಕೆಳಗಡೆ ಸಣ್ಣ ಪ್ರಮಾಣದ ಪೈಪ್ ಅಳವಡಿಸಿದ್ದರಿಂದ ಸೇತುವೆ ಮೇಲೆ ನೀರು ಹರಿದು ಪಾಚಿಗಟ್ಟಿದೆ ಇದ್ದರಿಂದ ಇಂತಹ ಅನಾಹುತಗಳು ನಡೆಯುತ್ತವೆ. -ತರಿಹಳ್ಳಿ ಮಂಜುನಾಥ- ಅಣಜಿಗೆರೆ