ಸಾಮಾಜಿಕ ಜಾಲತಾಣಗಳ ನಿಷೇಧ ಹಿಂತೆಗೆದುಕೊಂಡ ನೇಪಾಳ ಸರ್ಕಾರ

ಕಠ್ಮಂಡು : ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವ ನೇಪಾಳ ಸರಕಾರ ಇದೀಗ ಪ್ರತಿಭಟನೆ ಜೋರಾಗಿ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಬಳಿಕ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ.

ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ಘಟನೆಯಲ್ಲಿ 20 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಸೋಮವಾರ ತಡರಾತ್ರಿ ಘೋಷಿಸಿದೆ. ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಂಡಿದೆ.