Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹುಲಿಗೆ ಇಟ್ಟ ಬೋನಿನಲ್ಲಿ ಅರಣ್ಯ ಸಿಬ್ಬಂದಿ ಸೆರೆ: ವಿಶಿಷ್ಟ ರೀತಿಯಲ್ಲಿ ಗ್ರಾಮಸ್ಥರ ಪ್ರತಿಭಟನೆ

Spread the love

ಚಾಮರಾಜನಗರ : ಕಾಡಂಚಿನಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಸೆರೆ ಹಿಡಯಲು ವಿಫಲರಾದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಿಬ್ಬಂದಿಗಳನ್ನು ಹುಲಿಗೆ ಇಟ್ಟ ಬೋನ್ ನೊಳಗೆ ಗ್ರಾಮಸ್ಥರು ಕೂಡಿ ಹಾಕಿದ ಅಪರೂಪದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಹುಲಿ ಉಪಟಳ ಇರುವುದನ್ನು ಗ್ರಾಮಸ್ಥರು ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ಗ್ರಾಮಸ್ಥರ ಮನವಿಯಂತೆ ಬಂಡೀಪುರ ರಾಷ್ಟೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆಯವರು ಬೊಮ್ಮಲಾಪುರ ಗ್ರಾಮದಲ್ಲಿ ಹುಲಿ ಹಿಡಿಯಲು ಬೋನ್ ಕೂಡ ಅಳವಡಿಸಿದ್ದರು. ಆದರೆ ಹುಲಿ ಮಾತ್ರ ಬೋನ್ ಬಿದ್ದಿರಲಿಲ್ಲ. ಇದರಿಂದ ಹತಾಶರಾದ ಗ್ರಾಮಸ್ಥರು ಗ್ರಾಮಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನೇ ಹುಲಿಗಿಟ್ಟ ಬೋನ್ ನೊಳಗೆ ದಿಗ್ಬಂಧನ ಮಾಡಿದ್ದಾರೆ.

ಗ್ರಾಮಸ್ಥರ ಈ ಕ್ರಮದಿಂದ ವಿಚಲಿತರಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ತಮ್ಮನ್ನು ದಿಗ್ಬಂಧನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *