Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ದೆಹಲಿಯಲ್ಲಿ ಭೀಕರ ಅಪಘಾತ: ಹಣಕಾಸು ಸಚಿವಾಲಯದ ಅಧಿಕಾರಿ ನವಜೋತ್ ಸಿಂಗ್ ಸಾವು”

Spread the love

ನವದೆಹಲಿ: ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್​​ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು ಅವರ ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಟ್ಯಾಕ್ಸಿ ಮೂಲಕ ದಂಪತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಅಪಘಾತ ಹೇಗಾಯಿತು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ತಿಳಿದುಬಂದಿಲ್ಲ.


Spread the love
Share:

administrator

Leave a Reply

Your email address will not be published. Required fields are marked *