ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತೇಂದ್ರ ದಾಸ್ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ, ಚಿಕಿತ್ಸೆ ಫಲಿಸದೆ ನಿಧನ!

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಫೆಬ್ರವರಿ 12 ರ ಬುಧವಾರದಂದು ನಿಧನರಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವವಾದ ನಂತರ ಅವರು ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಆಸ್ಪತ್ರೆಯು ಮಾಹಿತಿ ನೀಡಿದೆ.
ಅಯೋಧ್ಯೆ ರಾಮ ದೇವಾಲಯದ ಪ್ರಧಾನ ಅರ್ಚಕ ಶ್ರೀ ಸತೇಂದ್ರ ದಾಸ್ ಇಂದು ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಗಿತ್ತು.