Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ: ದಡಕ್ಕೆ ಅಪ್ಪಳಿಸಿ ಬೋಟ್ ಜಖಂ, ಲಕ್ಷಾಂತರ ರೂ. ನಷ್ಟ

Spread the love

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ.

ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ.ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಬಳಿ ದಡಕ್ಕೆ ಅಪ್ಪಳಿಸಿತು.ಬೋಟ್‌ನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೋಟ್ ಮತ್ತು ಅದರಲ್ಲಿದ್ದ ಇತರೆ ಸಾಮಾಗ್ರಿಗಳು ಹಾನಿಗೊಳಗಾಗಿದ್ದು, ಸುಮಾರು 10 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.ಈ ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *