ಕಲ್ಲಂದಡ್ಕದಲ್ಲಿ ದುರಂತ: ಕಲ್ಲು ಕೊರೆ ಹೊಂಡದಲ್ಲಿ ಮುಳುಗಿ 10ನೇ ತರಗತಿ ವಿದ್ಯಾರ್ಥಿ ಸಾವು

ವಿಟ್ಲ : ಕಲ್ಲುಕೊರೆ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ಸಾವನಪ್ಪಿದ ಘಟನೆ ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ನಡೆದಿದೆ.

ಮೃತ ಬಾಲಕನನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಅಜ್ವಾನ್ ಸ್ನೇಹಿತರೊಂದಿಗೆ ಕಲ್ಲಿನ ಕೋರೆಗೆ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕನ ಮೃತದೇಹ ಇರಿಸಲಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
