ಸರ್ಕಾರದ ವಿರುದ್ಧ ಆಕ್ರೋಶ: ರಸ್ತೆಗೆ ಇಳಿದು ತಾವೇ ಗುಂಡಿ ಮುಚ್ಚಿದ ವಿಪಕ್ಷ ನಾಯಕ ಆರ್. ಅಶೋಕ್

ಈಗ ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ (Pothole) ಸಮಸ್ಯೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಸ್ತೆಗಳು ಹದಗೆಟ್ಟು ಹೋಗಿವೆ. ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾದ ಬಳಿಕ ಸರ್ಕಾರ ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪ್ರಾರಂಭಿಸಿದ್ದು, ಈ ನಡುವೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕ ರವಿ ಸುಬ್ರಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಆರ್. ಅಶೋಕ್ ಸ್ವತಃ ತಾವೇ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
