ಭೀಮಾ ನದಿ ಉಕ್ಕಿ ಹರಿಯುತ್ತಿದೆ; ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ತೀರದಲ್ಲಿರುವ ಯಲ್ಲಮ್ಮ ದೇವಸ್ಥಾನ ಮುಳುಗಡೆಯಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಧಾರ್ಮಿಕ ಕ್ಷೇತ್ರ ಗಾಣಗಾಪುರ ಸೇತವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಸುಮಾರು ನಾಲ್ಕೈದು ಅಡಿ ನೀರು ಬಂದಿದ್ದು, ಇದರಿಂದಾಗಿ ಜೇವರ್ಗಿ-ಅಫಜಲಪುರ ಸಂರ್ಪಕ ಕಡಿತಗೊಂಡಿದೆ. ನದಿ ತೀರದಲ್ಲಿರುವ ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ವಿಡಿಯೋ ನೋಡಿ.
