Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಸ್. ಎಲ್. ಭೈರಪ್ಪ ಅಂತ್ಯಕ್ರಿಯೆ ಯಾವಾಗ, ಎಲ್ಲಿ

Spread the love

ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಲ್ಲೇ ತಮ್ಮದೇ ಛಾಪು ಮೂಡಿಸಿರುವ ಎಸ್‌ಎಲ್‌ ಭೈರಪ್ಪ ನಮ್ಮನ್ನು ಅಗಲಿದ್ದಾರೆ. ಕನ್ನಡದ ಮೇರು ಸಾಹಿತಿ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ತಮ್ಮ 94ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತ ಕಂಡ ಪ್ರಸಿದ್ಧ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಚಿತ್ರಕಥೆಗಾರ ಇನ್ನು ನೆನಪು ಮಾತ್ರ. ಹಾಗೇ ಅವರ ಕಾದಂಬರಿಗಳು ಮಾತ್ರ ಎಂದೆಂದಿಗೂ ಅಜರಾಮರವಾಗಿವೆ. ಇನ್ನು ಕನ್ನಡ ಸರಸ್ವತಿ ಪುತ್ರನ ಅಂತಿಮ ದರ್ಶನ ಎಲ್ಲೆಲ್ಲಿ? ಅಂತ್ಯಕ್ರಿಯೆ ಯಾವಾಗ? ಎಲ್ಲಿ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ

ಬೆಂಗಳೂರು/ಮೈಸೂರು, (ಸೆಪ್ಟೆಂಬರ್ 24): ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ (SL Bhyrappa) ವಿಧಿವಶರಾಗಿದ್ದಾರೆ. ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ (SL Bhyrappa Funeral) ಶುಕ್ರವಾರ ಅಂದರೆ ಸೆಪ್ಟೆ.ಬರ್ 26ರಂದು ಮೈಸೂರಿನ (Mysuru) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ. ಈ ಬಗ್ಗೆ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್ ಎಲ್ ಭೈರಪ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಭೈರಪ್ಪ ಅವರ ಪಾರ್ತೀವ ಶರೀರವನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇರಿಸಲಾಗಿದ್ದು. ನಾಳೆ (ಸೆಪ್ಟೆಂಬರ್ 25) ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನನ ವ್ಯವಸ್ಥೆ ಮಾಡಲಾಗುತ್ತದೆ.

ಇನ್ನು ನಾಳೆ (ಸೆಪ್ಟೆಂಬರ್ 25) ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿದ ಡಾ. ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆಯಾದರೂ ಅವರ ಕಾದಂಬರಿಗಳು ಮಾತ್ರ ಎಂದೆಂದಿಗೂ ಅಜರಾಮರ. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ. ಕರ್ನಾಟಕದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *