Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ; ‘ಹಿಸ್ಟರಿ… ಹಿಸ್ಟರಿ… ಹಿಸ್ಟರಿ…’ ಎಂದ ನೆಟ್ಟಿಗರು

Spread the love

India vs Bangladesh: ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 168 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಸೈಫ್ ಹಸನ್ 51 ಎಸೆತಗಳಲ್ಲಿ 69 ರನ್ ಬಾರಿಸಿದರು. ಇದಾಗ್ಯೂ ಬಾಂಗ್ಲಾದೇಶ್ ತಂಡ 127 ರನ್​ಗಳಿಗೆ ಆಲೌಟ್ ಆಗುವ ಮೂಲಕ 41 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ (Team India) ಹೊಸ ದಾಖಲೆ ಬರೆದಿದೆ. ಅದು ಸಹ ಕ್ಯಾಚ್ ಕೈ ಚೆಲ್ಲುವ ಮೂಲಕ..! ಅಂದರೆ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಬ್ಬ ಬ್ಯಾಟರ್​ಗೆ ಅತ್ಯಧಿಕ ಬಾರಿ ಜೀವದಾನ ನೀಡಿದ ಅಪಕೀರ್ತಿ ಭಾರತ ತಂಡದ ಪಾಲಾಗಿದೆ.

ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಾಂಗ್ಲಾದೇಶ್ ಪರ ಆರಂಭಿಕರಾಗಿ ಸೈಫ್ ಹಸನ್ ಹಾಗೂ ತಂಝಿದ್ ಹಸನ್ ಕಣಕ್ಕಿಳಿದಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸೈಫ್ ಹಸನ್​ಗೆ ಟೀಮ್ ಇಂಡಿಯಾ ಫೀಲ್ಡರ್ ಗಳು ನೀಡಿದ ಜೀವದಾನಗಳ ಸಂಖ್ಯೆ ಬರೋಬ್ಬರಿ ನಾಲ್ಕು. 40 ರನ್ ಗಳಿಸಿದ್ದಾಗ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ಆರಂಭಿಕನಿಗೆ ಮೊದಲ ಜೀವದಾನ ನೀಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಸೈಫ್ ಹಸನ್ ಅರ್ಧಶತಕ ಪೂರೈಸಿದರು.

ಇದಾದ ಬಳಿಕ 65, 67 ರನ್ ಗಳಿಸಿದ್ದ ವೇಳೆ ಶಿವಂ ದುಬೆ ಎರಡು ಬಾರಿ ಕ್ಯಾಚ್ ಕೈಬಿಟ್ಟರು. ಇನ್ನು 67 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಕ್ಯಾಚ್ ಕೈಚೆಲ್ಲಿದರು. ಈ ಮೂಲಕ ಟೀಮ್ ಇಂಡಿಯಾ ಫೀಲ್ಡರ್​ಗಳು ಸೈಫ್ ಹಸನ್​ಗೆ ಬರೋಬ್ಬರಿ 4 ಜೀವದಾನಗಳನ್ನು ನೀಡಿದ್ದಾರೆ.

ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಜೀವದಾನ ಪಡೆದ ಬ್ಯಾಟರ್ ಎಂಬ ದಾಖಲೆ ಸೈಫ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಇತ್ತ ಇನಿಂಗ್ಸ್​ವೊಂದರಲ್ಲಿ ಒಬ್ಬನೇ ಬ್ಯಾಟರ್​ನ ಅತೀ ಹೆಚ್ಚು ಕ್ಯಾಚ್ ಕೈಚೆಲ್ಲಿದ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *