Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಳೆ ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಜಿಲ್ಲೆ ಇದೆಯಾ ಎಂದು ಚೆಕ್ ಮಾಡಿ

Spread the love

ಬೆಂಗಳೂರು: ಕರ್ನಾಟಕದ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ, ಒಂದು ದಿನ ಒಂದು ಕಡೆ ಮತ್ತೊಂದು ದಿನ ಮತ್ತೊಂದು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆ ತುಸು ಹೆಚ್ಚಾಗಿದೆ. 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಮಂಕಿ, ಹೊನ್ನಾವರ, ಕದ್ರಾ, ಕಾರವಾರ, ಕುಮಟಾ, ಮುದ್ದೇಬಿಹಾಳ, ಆಗುಂಬೆ, ಅಂಕೋಲಾ, ಅಣ್ಣಿಗೆರೆ, ಭಾಗಮಂಡಲ, ಗದಗ, ಗೇರುಸೊಪ್ಪ, ಕುಷ್ಟಗಿ, ಮಂಠಾಳ, ಪುತ್ತೂರು, ಯಲಬುರ್ಗಾದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೀಡಕವಿದ ವಾತಾವರಣವಿದೆ, ಗುರುವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 26.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ

ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *