ಸಿಲಿಂಡರ್ ಸ್ಫೋಟಕ್ಕೆ ಮನೆ ಕುಸಿತ, ಒಂದೇ ಕುಟುಂಬದ 8 ಮಂದಿಗೆ ಗಾಯ

ಬಳ್ಳಾರಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ (Hospete) ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟದಲ್ಲಿ ಹಾಲಪ್ಪ (42), ಕವಿತಾ (32), ಗಂಗಮ್ಮ (63), ಮೈಲಾರಪ್ಪ (48), ಹಾಗೂ ಮಲ್ಲಮ್ಮ ಸೇರಿ 8 ಜನ ಗಾಯಗೊಂಡಿದ್ದಾರೆ.

ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಬಳ್ಳಾರಿ (Ballari) ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಿಲಿಂಡರ್ ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಘಟನಾ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.