ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಅಲ್ಪ ಇಳಿಕೆ: ಇಲ್ಲಿದೆ ಇಂದಿನ ದರಪಟ್ಟಿ

ಚಿನ್ನಕ್ಕೆ ಭಾರತದಂತಹ ದೇಶದಲ್ಲಿ ಬೇಡಿಕೆ ಇದ್ದೆ ಇರುತ್ತದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕವೆಂದೇ ಭಾವಿಸಲಾಗಿದೆ. ಹಾಗಾಗಿ, ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ.

ಹಬ್ಬ ಮುಗಿಯುತ್ತಿದ್ದಂತೆ ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಇವತ್ತು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ, ಜೊತೆಗೆ ಬೆಳ್ಳಿಯ ಬೆಲೆಯೂ ತಗ್ಗಿದೆ.
ಬೆಲೆ ಏರಲಿ, ಇಳಿಯಲಿ.. ಅದಕ್ಕಿರುವ ಡಿಮ್ಯಾಂಡ್ ಮಾತ್ರ ಕಮ್ಮಿ ಆಗಲ್ಲ. ರೇಟ್ ಎಷ್ಟಿದ್ದರೂ ಚಿನ್ನದ ಬೇಡಿಕೆ ಕಮ್ಮಿ ಆಗುತ್ತಿಲ್ಲ. ಚಿನ್ನವನ್ನು ಬಿಸ್ಕತ್, ಗಟ್ಟಿ ಬಂಗಾರ ಇಲ್ಲವೇ ಆಭರಣಗಳ ರೂಪದಲ್ಲಿ ಸಾಮಾನ್ಯವಾಗಿ ಕೊಳ್ಳಲಾಗುತ್ತದೆ. ಚಿನ್ನವನ್ನು ಸಾಮಾನ್ಯವಾಗಿ ಪ್ರತಿಯೊಬ್ಬರು ಕೊಳ್ಳಲು ಬಯಸುತ್ತಾರೆ, ತಲೆದೋರುವ ಕಷ್ಟದ ಸಂದರ್ಭಗಳಲ್ಲಿ ಚಿನ್ನವು ಆಪದ್ಭಾಂಧವನಂತೆ ಸಹಾಯಕ್ಕೆ ಬರುತ್ತದ ಎಂದು ಇದರ ಖರೀದಿ ಕೂಡ ಹೆಚ್ಚು.
ಇನ್ನೊಂದೆಡೆ ರಾಷ್ಟ್ರದ ಆರ್ಥಿಕ ಸ್ಥಿರತೆಯನ್ನು ಖಾತ್ರಿಪಡಿಸುವಲ್ಲಿ ಚಿನ್ನದ ಮೀಸಲುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ, ವಿಶೇಷವಾಗಿ ಆರ್ಥಿಕ ಅನಿಶ್ಚಿತತೆಯ ಸಮಯದಲ್ಲಿ ಮೌಲ್ಯದ ವಿಶ್ವಾಸಾರ್ಹ ಸಂಗ್ರಹವಾಗಿ ಕಾರ್ಯನಿರ್ವಹಿಸುತ್ತವೆ. ಹಾಗಾಗಿ ಭಾರತವು ಸಹ ಸಾಕಷ್ಟು ಅಗಾಧ ಪ್ರಮಾಣದ ಚಿನ್ನದ ಮೀಸಲನ್ನು ಹೊಂದಿದೆ.
ಇನ್ನು ಚಿನ್ನಕ್ಕೆ ಭಾರತದಂತಹ ದೇಶದಲ್ಲಿ ಬೇಡಿಕೆ ಇದ್ದೆ ಇರುತ್ತದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕವೆಂದೇ ಭಾವಿಸಲಾಗಿದೆ. ಹಾಗಾಗಿ, ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ.
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 10,820 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 10,840, ರೂ. 10,820, ರೂ. 10,820 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 10,835 ರೂ. ಆಗಿದೆ.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,853 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,820 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,804 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 71,824 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 86,560 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 94,432 ಆಗಿದೆ
ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 88,530 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,08,200 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,18,040. ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,85,300, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,82,000 ಮತ್ತು 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,80,400 ಆಗಿದೆ
ಇನ್ನು ಬೆಳ್ಳಿ, ಚಿನ್ನದಷ್ಟು ಅಪರೂಪ ಅಲ್ಲದೆ ಹೋದರೂ ತನ್ನದೆ ಆದ ವಿಶೇಷತೆ ಹೊಂದಿದೆ ಹಾಗೂ ಚಿನ್ನದಂತೆಯೇ ಖರೀದಿಸಲ್ಪಡುವ ಮತ್ತೊಂದು ಆಕರ್ಷಕ ಲೋಹವಾಗಿದೆ. ಕೇವಲ ಆಭರಣಗಳು ಮಾತ್ರವಲ್ಲ ವೈಜ್ಞಾನಿಕವಾಗಿಯೂ ಮಹತ್ವ ಹೊಂದಿದೆ ಬೆಳ್ಳಿ. ಭಾರತದಲ್ಲಿ ಬೆಳ್ಳಿಯಿಂದ ತಯಾರಿಸಲಾದ ವಸ್ತುಗಳನ್ನು ಹೆಚ್ಚಾಗಿ ಕೊಳ್ಳಲಾಗುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಅಲ್ಪ ಕುಸಿತವಾಗಿರುವುದನ್ನು ಕಾಣಬಹುದು.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,51,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,510 ರೂ. 15,100 ಹಾಗೂ ರೂ. 1,51,000 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 1,61,000 ಆಗಿದ್ದರೆ, ದೆಹಲಿಯಲ್ಲಿ ರೂ. 1,51,000, ಮುಂಬೈನಲ್ಲಿ ರೂ. 1,51,000 ಹಾಗೂ ಕೊಲ್ಕತ್ತದಲ್ಲೂ ರೂ. 1,51,000 ಗಳಾಗಿದೆ.