ಯು.ಟಿ. ಖಾದರ್ ಸೇರಿ ಮೂವರು ಸಾಧಕರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿದೆ.

ಅಕ್ಟೋಬರ್ 8 ರಂದು ನಡೆಯುವ ವಿವಿಯ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಯುಟಿ ಖಾದರ ಅವರ ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಅವರಿಗೆ
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬುಧವಾರ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ಎಸ್.ಎಂ.ಜಯಕರ್ ಅವರು ತಿಳಿಸಿದ್ದಾರೆ.