Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಿಳಾ ಏಕದಿನ ವಿಶ್ವಕಪ್ 2025: ಹ್ಯಾಟ್ರಿಕ್ ಗೆಲುವಿಗೆ ಭಾರತ ಸಜ್ಜು; ದಕ್ಷಿಣ ಆಫ್ರಿಕಾ ವಿರುದ್ಧ ಇಂದೇ ಮಹತ್ವದ ಪಂದ್ಯ!

Spread the love

Women’s ODI World Cup 2025: 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಸತತ ಎರಡು ಗೆಲುವುಗಳೊಂದಿಗೆ ಶುಭಾರಂಭ ಮಾಡಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ಸ್ಮೃತಿ ಮಂಧಾನ ಮತ್ತು ತಜ್ಮಿನ್ ಬ್ರಿಟ್ಸ್ ನಡುವಿನ ಶತಕಗಳ ಸ್ಪರ್ಧೆ ಈ ಪಂದ್ಯದ ಪ್ರಮುಖ ಆಕರ್ಷಣೆಯಾಗಿದೆ. ಅಕ್ಟೋಬರ್ 9ರಂದು ವಿಶಾಖಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು JIOHotstar ನಲ್ಲಿ ವೀಕ್ಷಿಸಬಹುದು.

ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯುತ್ತಿರುವ 2025 ರ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ (Women’s World Cup 2025) ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿದ್ದ ಭಾರತ, ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣ್ಣು ಮುಕ್ಕಿಸಿತ್ತು. ಇದೀಗ ತನ್ನ ಮೂರನೇ ಪಂದ್ಯಕ್ಕೆ ಸಜ್ಜಾಗಿರುವ ಹರ್ಮನ್‌ಪ್ರೀತ್ ಕೌರ್ ಪಡೆ ತನ್ನ ಮುಂದಿನ ಸವಾಲಾಗಿ ದಕ್ಷಿಣ ಆಫ್ರಿಕಾವನ್ನು (India vs South Africa) ಎದುರಿಸುತ್ತಿದೆ. ಇತ್ತ ದಕ್ಷಿಣ ಆಫ್ರಿಕಾ ಕೂಡ ಗೆಲುವಿನೊಂದಿಗೆ ಬರುತ್ತಿರುವ ಕಾರಣ ಟೀಂ ಇಂಡಿಯಾ ಬಹಳ ಎಚ್ಚರಿಕೆಯಿಂದ ಆಡಬೇಕಾಗುತ್ತದೆ.

ಸ್ಮೃತಿ- ಬ್ರಿಟ್ಸ್ ಮುಖಾಮುಖಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾದಾಗ, ಎಲ್ಲರ ಕಣ್ಣುಗಳು ಸ್ಮೃತಿ ಮಂಧಾನ ಮತ್ತು ತಜ್ಮಿನ್ ಬ್ರಿಟ್ಸ್ ಮೇಲೆ ಇರುತ್ತವೆ. ಈ ಇಬ್ಬರು ಆಟಗಾರ್ತಿಯರು ಈ ವರ್ಷದ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಮತ್ತು ಅತ್ಯಧಿಕ ಶತಕ ಬಾರಿಸಿದ್ದಾರೆ. ಸ್ಮೃತಿ ಮಂಧಾನ ನಾಲ್ಕು ಶತಕಗಳು ಸೇರಿದಂತೆ 800 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇತ್ತ ಹಿಂದಿನ ಪಂದ್ಯದಲ್ಲಿ ತಜ್ಮಿನ್ ಬ್ರಿಟ್ಸ್ ಒಂದೇ ವರ್ಷದಲ್ಲಿ ಐದು ಶತಕಗಳನ್ನು ಗಳಿಸಿದ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಒಟ್ಟಾರೆಯಾಗಿ, ಈ ಇಬ್ಬರ ನಡುವಿನ ಸ್ಪರ್ಧೆಯು ವಿಶಿಷ್ಟ ರೋಮಾಂಚನವನ್ನು ಸೃಷ್ಟಿಸುತ್ತದೆ. ಉಳಿದಂತೆ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಹೀಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ಏಕದಿನ ವಿಶ್ವಕಪ್‌ನ 10 ನೇ ಪಂದ್ಯ ಯಾವ ದಿನ ನಡೆಯಲಿದೆ?
ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 10 ನೇ ಪಂದ್ಯವು ಅಕ್ಟೋಬರ್ 9 ರ ಗುರುವಾರ ನಡೆಯಲಿದೆ.

ಭಾರತ-ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 2:30 ಕ್ಕೆ ನಡೆಯಲಿದೆ.

ಭಾರತ-ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ-ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಭಾರತ-ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವನ್ನು ಯಾವ ಟಿವಿ ಚಾನೆಲ್ ಪ್ರಸಾರ ಮಾಡುತ್ತದೆ?
ಮಹಿಳಾ ವಿಶ್ವಕಪ್‌ನ ಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದೆ. ನೀವು ಸ್ಟಾರ್ ಸ್ಪೋರ್ಟ್ಸ್‌ನ ಪ್ರತ್ಯೇಕ ಚಾನೆಲ್‌ಗಳಾದ ಸ್ಟಾರ್ ಸ್ಪೋರ್ಟ್ಸ್ 1/HD ಮತ್ತು ಸ್ಟಾರ್ ಸ್ಪೋರ್ಟ್ಸ್ ಹಿಂದಿ/HD ಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ವ್ಯಾಖ್ಯಾನದೊಂದಿಗೆ ಟಿವಿಯಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದು.

ಭಾರತ-ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವನ್ನು ಯಾವ ವೇದಿಕೆಯಲ್ಲಿ ಆನ್‌ಲೈನ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ?
ಅಕ್ಟೋಬರ್ 9 ರಂದು ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು JIOHotstar ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿWomen’s ODI World Cup 2025: 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಸತತ ಎರಡು ಗೆಲುವುಗಳೊಂದಿಗೆ ಶುಭಾರಂಭ ಮಾಡಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ಸ್ಮೃತಿ ಮಂಧಾನ ಮತ್ತು ತಜ್ಮಿನ್ ಬ್ರಿಟ್ಸ್ ನಡುವಿನ ಶತಕಗಳ ಸ್ಪರ್ಧೆ ಈ ಪಂದ್ಯದ ಪ್ರಮುಖ ಆಕರ್ಷಣೆಯಾಗಿದೆ. ಅಕ್ಟೋಬರ್ 9ರಂದು ವಿಶಾಖಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು JIOHotstar ನಲ್ಲಿ ವೀಕ್ಷಿಸಬಹುದು.


Spread the love
Share:

administrator

Leave a Reply

Your email address will not be published. Required fields are marked *