Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

60 ಕೋಟಿ ರೂ. ವಂಚನೆ ಪ್ರಕರಣ: ನೋಟು ಅಮಾನ್ಯೀಕರಣದಿಂದ ನಷ್ಟವಾಯಿತು ಎಂದ ರಾಜ್ ಕುಂದ್ರಾ

Spread the love

ನೋಟು ಅಮಾನ್ಯೀಕರಣದಿಂದಾಗಿ (Demonetisation) ತಮ್ಮ ವ್ಯವಹಾರವು ಭಾರೀ ನಷ್ಟ ಅನುಭವಿಸಿದೆ. ಅಮಾನ್ಯೀಕರಣದಿಂದಾಗಿಯೇ ಸಾಲ ಪಾವತಿಸಲು ಆಗಿರಲಿಲ್ಲ ಎಂದು ಅಂತ 60 ಕೋಟಿ ವಂಚನೆ ಪ್ರಕರಣದಲ್ಲಿ ತನಿಖೆ ಎದುರಿಸ್ತಿರುವ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್‌ಕುಂದ್ರಾ (Raj Kundra) ಹೇಳಿದ್ದಾರೆ.

ತಮ್ಮ ಕಂಪನಿಯು ವಿದ್ಯುತ್ ಮತ್ತು ಗೃಹೋಪಯೋಗಿ ಉಪಕರಣಗಳಲ್ಲಿ ವ್ಯಾಪಾರ ಮಾಡುತ್ತಿತ್ತು. 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ನೋಟು ರದ್ದತಿಯ ನಂತರ ಕಂಪನಿಯು ಬಹಳಷ್ಟು ನಷ್ಟ ಎದುರಿಸಿದೆ. ಕಂಪನಿ ಪಡೆದ ಸಾಲವನ್ನ ಮರುಪಾವತಿಸಲು ಸಾಧ್ಯವಾಗಿಲ್ಲ ಅಂದಿದ್ದಾರೆ. 

ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿ ದೀಪಕ್ ಕೊಠಾರಿ ಅನ್ನೋವ್ರಿಗೆ 60 ಕೋಟಿ ರೂ. ವಂಚಿಸಿರುವ ಕೇಸಲ್ಲಿ ಈಗಾಗಲೇ 2 ಬಾರಿ ವಿಚಾರಣೆಗೆ ಒಳಪಡಿಸಲಾಗಿದ್ದು, ಮತ್ತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ. ಅಂದಹಾಗೆ, ಪತಿ ಕಂಪನಿಯ ಯಾವ ವ್ಯವಹಾರವನ್ನೂ ನಾನು ನೋಡಿಕೊಳ್ಳುತ್ತಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ವಿಚಾರಣೆಯಲ್ಲಿ ಹೇಳಿಕೊಂಡಿದ್ದಾರೆ.

ಮೊದಲು 60 ಕೋಟಿ ಠೇವಣಿ ಇಡಿ ಅಂದಿದ್ದ ಕೋರ್ಟ್‌
60 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ ಭಾರಿ ಹಿನ್ನಡೆಯಾಗಿತ್ತು. ಅಮೆರಿಕದ ಲಾಸ್ ಏಂಜಲೀಸ್‌ ಸೇರಿದಂತೆ ಇತರ ದೇಶಗಳ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಶಿಲ್ಪಾ ಶೆಟ್ಟಿ ದಂಪತಿಗೆ ಬಾಂಬೆ ಹೈಕೋರ್ಟ್‌ (Bombay High Court) ಇತ್ತೀಚೆಗೆ ತಡೆ ನೀಡಿದೆ.

ಕಾರ್ಯಕ್ರಮ ನಿಮಿತ್ತ ಲಾಸ್ ಎಂಜಲೀಸ್ (Los Angeles) ಮತ್ತು ಇತರ ದೇಶಗಳಿಗೆ ತೆರಳಬೇಕಿತ್ತು. ಹೀಗಾಗಿ ಬಾಂಬೆ ಹೈಕೋರ್ಟ್, ಲಾಸ್ ಏಂಜಲೀಸ್ ಮತ್ತು ಇತರ ವಿದೇಶಗಳಿಗೆ ಪ್ರಯಾಣಿಸಲು ಬಯಸಿದರೆ ಮೊದಲು 60 ಕೋಟಿ ರೂಪಾಯಿ ಡೆಪಾಸಿಟ್ ಇಡಿ ಎಂದು ಹೇಳಿತ್ತು

ಏನಿದು ವಂಚನೆ ಪ್ರಕರಣ?
2015 ರಿಂದ 2023ರ ನಡುವೆ, ದಂಪತಿ ತಮ್ಮ ವ್ಯವಹಾರ ವಿಸ್ತರಿಸುವ ನೆಪದಲ್ಲಿ ನನ್ನಿಂದ 60 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ದೀಪಕ್ ಕೊಠಾರಿ ಆರೋಪಿಸಿದ್ದರು. ದಂಪತಿ ಹಣವನ್ನು ಸಾಲವಾಗಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *