Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ವಿಜ್ಞಾನ ಓದುವವರ ಸಂಖ್ಯೆ ಇಳಿಕೆ ಅಪಾಯಕಾರಿ”: ವೈಜ್ಞಾನಿಕ ಮನೋಭಾವ ಸಮಾಜದ ಪ್ರಗತಿಗೆ ಅಗತ್ಯ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಂಗಳೂರು : ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅಗತ್ಯ. ಆದರೆ, ಇತ್ತೀಚಿನ ವರ್ಷಗಳಲ್ಲಿ ವಿಜ್ಞಾನ ಓದುವ ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಅನೇಕ ಶಾಸಕ, ಸಚಿವರು ವಿಜ್ಞಾನ ಶಿಕ್ಷಣ ಪಡೆದವರಾಗಿರುತ್ತಾರೆ. ಆದರೂ ಕೂಡ ಮೌಡ್ಯಗಳನ್ನು ನಂಬುತ್ತಾರೆ. ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ‌ ಮನೋಭಾವ ಇಲ್ಲದಿರುವುದು ದುರಂತ. ಅಂತಹವರನ್ನು ನೋಡಿದಾಗ ವಿಜ್ಞಾನ ಓದಿದ್ದಾರಾ, ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆಯಾ, ಇಲ್ಲ ಓದಿದ್ದೇ ವ್ಯರ್ಥವಾ ಎನಿಸುತ್ತದೆ ಎಂದು ಹೇಳಿದರು.

ಬಹಳ ಹಿಂದೆಯೇ ಬಸವಾದಿ ಶರಣರು ಮೌಡ್ಯ, ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಗೂ ಮೌಡ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಡ್ಯವನ್ನು ಬಿತ್ತುತ್ತಾರೆ. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ‘ಮೌಡ್ಯ ನಿಷೇಧ ಕಾಯ್ದೆ’ ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಡ್ಯ ಮತ್ತು ಮೌಡ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ. ವಿದ್ಯಾರ್ಥಿಗಳು ಇದಕ್ಕೆ ಸಡ್ಡು ಹೊಡೆದು ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಆಗ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ ಎಂದರು.


ಉತ್ತರ ಪ್ರದೇಶದಲ್ಲಿ ಫೋರೆನ್ಸಿಕ್ ವಿಜ್ಞಾನ ಪ್ರಯೋಗಾಲಯಗಳ ಸಂಖ್ಯೆ 4 ರಿಂದ 12ಕ್ಕೆ ಏರಿಕೆ
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಅವಕಾಶಗಳು ಬೇಕು ಅಷ್ಟೆ. ಅಂತಹ ಅವಕಾಶಗಳು ಬಂದಾಗ ವಿದ್ಯಾರ್ಥಿಗಳು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.

ನೃಪತುಂಬ ವಿಶ್ವವಿದ್ಯಾಲಯದಲ್ಲಿ 52 ಕೋಟಿ ರು. ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರು. ಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಅಷ್ಟು ಅನುದಾನ ಕೊಡಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್, ಇಲಾಖಾ ಕಾರ್ಯದರ್ಶಿ ಖುಷ್ಬೂ ಗೋಯಲ್‌ ಚೌಧರಿ, ಉನ್ನತ ಶಿಕ್ಷಣ ಪರಿಷತ್‌ನ ಉಪಾಧ್ಯಕ್ಷ ಪ್ರೊ.ನಿರಂಜನ್‌, ಪ್ರಭಾರ ಕುಲಪತಿ ಪ್ರೊ.ಫಜೀಹಾ ಸುಲ್ತಾನಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.


Spread the love
Share:

administrator

Leave a Reply

Your email address will not be published. Required fields are marked *