Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಂತಾರ ಚಾಪ್ಟರ್‌ 1 V/s ದೈವದ ನುಡಿ: ‘ಹುಚ್ಚು ಕಟ್ಟಿದವರನ್ನ ಆಸ್ಪತ್ರೆಗೆ ಸೇರಿಸುತ್ತೇನೆ’ ಎಂಬುದು ಸಿನಿಮಾ ಬಗ್ಗೆ ಅಲ್ಲ; ದೈವಸ್ಥಾನ ಆಡಳಿತ ಮಂಡಳಿಯಿಂದ ಸ್ಪಷ್ಟನೆ

Spread the love

ಮಂಗಳೂರು: ಕಾಂತಾರ ಚಿತ್ರದ (Kantara Chapter 1) ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಪೆರಾರ ಶ್ರೀ ಬ್ರಹ್ಮ ದೇವರು ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಹೇಳಿದೆ.

ತುಳುನಾಡಿನಲ್ಲಿ ಕಾಂತಾರ v/s ದೈವರಾಧಕರು ಫೈಟ್ ವಿಚಾರ ಜೋರಾಗುತ್ತಿದ್ದಂತೆ ಈಗ ದೈವದ ನುಡಿ ಕುರಿತು ದೈವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

“ಹುಚ್ಚು ಕಟ್ಟಿದವರನ್ನ ಹುಚ್ಚು ಕಟ್ಟಿಸುತ್ತೇನೆ.. ಹಣವನ್ನ ಆಸ್ಪತ್ರೆಗೆ ಸುರಿಸುತ್ತೇನೆ” ಎಂದು ದೈವ ನುಡಿದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ನುಡಿ ಜೋರಾಗುತ್ತಿದ್ದಂತೆ ವಾದ ವಿವಾದ ಆರಂಭವಾಗಿತ್ತು. ಕಾಂತಾರ ಸಿನಿಮಾ ಹಾಗೂ ದೈವದ ಅನುಕರಣೆ ಮಾಡಿದವರಿಗೆ ಎಚ್ಚರಿಕೆ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ದೈವಸ್ಥಾನದ ಆಡಳಿತ ಮಂಡಳಿಯಿಂದಲೇ ಸ್ಪಷ್ಟನೆ ನೀಡಿ ವಿಷಯಕ್ಕೆ ಇತೀಶ್ರೀ ಹಾಡಲು ಮುಂದಾಗಿದೆ.

ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಮಂಗಳೂರು ತಾಲೂಕು ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ ಪಿಲಿಚಾಂಡಿ ದೈವಸ್ಥಾನ -ಪಡುಪೆರಾರ ಕ್ಷೇತ್ರದಲ್ಲಿ ನಡೆದ ಬಲವಾಂಡಿ-ಪಿಲಿಚಾಂಡಿ ದೈವಗಳ ಪುದರ್ -ಮೆಚ್ಚಿ ಜಾತ್ರೆ ಸಮಯದ ದೈವಪಾತ್ರಿ ದರ್ಶನ -ದೈವದ ನಡೆ-ನುಡಿಗಳ ಬಗ್ಗೆ ಉಂಟಾದ ಗೊಂದಲ-ಭಿನ್ನಾಭಿಪ್ರಾಯ ವಿಚಾರದಲ್ಲಿ ಆಡಳಿತ ಮಂಡಳಿಯ ಸ್ಪಷ್ಟಿಕರಣ ನೀಡುತ್ತಿದೆ

ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ -ಪಿಲಿಚಾಂಡಿ ದೈವಸ್ಥಾನ, ಪಡುಪೆರಾರ-ಕ್ಷೇತ್ರದಲ್ಲಿ ಶತಮಾನದ ಕಾಲದ ಕಟ್ಟು ಕಟ್ಟುಳೆಯಂತೆ, ಗುತ್ತು ಬರ್ಕೆ ಮಹನೀಯರು ಹಾಗೂ ಗ್ರಾಮಸ್ಥರು, ಸಾರ್ವಜನಿಕರ ಕೂಡವಿಕೆಯಿಂದ ನಡೆಸಲ್ಪಡುವ ಪುರ್-ಮೆಚ್ಚಿ ಜಾತ್ರೆಯು ಇತ್ತೀಚಿಗೆ ಕ್ಷೇತ್ರದಲ್ಲಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ದೈವದ ಪಾತ್ರಿ-ದೈವವು ನೀಡಿದ ಅಭಯ -ನಡೆ-ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ಏರ್ಪಟ್ಟಿರುವುದು ಕ್ಷೇತ್ರದ ಆಡಳಿತ ಮಂಡಳಿಯ ಗಮನಕ್ಕೆ ಬಂದಿರುತ್ತದೆ.

ಕ್ಷೇತ್ರದ ಬಲವಾಂಡಿ -ಪಿಲಿಚಾಂಡಿ ದೈವದ ನರ್ತನದ ಬಳಿಕ ನಡೆಯುವ ನಡೆ-ನುಡಗಳ ಸಂದರ್ಭದಲ್ಲಿ ಕೆಲವೊಂದು ಯುವಕರುಗಳು ದೈವ-ದೇವರ, ಆಚಾರ-ವಿಚಾರದಲ್ಲಿ ಆಗುತ್ತಿರುವ ಅಪಪ್ರಚಾರ ವಿಚಾರದಲ್ಲಿ ದೈವದ ಸಮಕ್ಷಮ ನಿವೇದನೆ ಮಾಡಿ ಕೊಂಡಿರುತ್ತಾರೆ. ಈ ಬಗ್ಗೆ ದೈವವು ಸೂಕ್ತ ಅಭಯವನ್ನು ನೀಡಿರುತ್ತದೆ ವಿನಾ: ಯಾವುದೇ ಚಲನಚಿತ್ರ, ಅದರಲೂ ಮುಖ್ಯವಾಗಿ ಪ್ರಕೃತ ಪ್ರಚಾರದಲ್ಲಿರುವ ಕಾಂತರ-1 ಬಗ್ಗೆ ಯಾವುದೇ ಅಭಯ ನುಡಿಯನ್ನು ದೈವವು ನೀಡಿರುವುದಿಲ್ಲ. ಆದರೆ ದೈವವು ನಿವೇದನೆಗೆ ಸಂಬಂಧಿಸಿ ನೀಡಿದ ಅಭಯ-ನುಡಿಯನ್ನು ನಿವೇದಿಸಿಕೊಂಡ ಯುವಕರು ಮಾಧ್ಯಮಗಳಿಗೆ ಬಿಡುಗಡೆ ಮಾಡಿ, ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ಮಾಡಿರುವುದಕ್ಕೆ ಶ್ರೀಕ್ಷೇತ್ರದ ಭಕ್ತರು ಗ್ರಾಮಸ್ಥರು, ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿರುವುದರಿಂದ ಈ ಸ್ಪಷ್ಟಿಕರಣವನ್ನು ಆಡಳಿತ ಮಂಡಳಿ ನೀಡುತ್ತಿದೆ.

ಮೇಲಿನಂತೆ ಶ್ರೀ ಕ್ಷೇತ್ರ ಪೆರಾರದದಲ್ಲಿ ನಡೆದ ಜಾತ್ರ ಸಂದರ್ಭದಲ್ಲಿನ ದೈವ ನಡೆ-ನುಡಿಯಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಗಳು /ಚಲನಚಿತ್ರದ ಬಗ್ಗೆ ಯಾವುದೇ ಅಭಯ-ನುಡಿ ನೀಡುವ ಸಂದರ್ಭ ಬಂದಿರುವ ಕಾರಣ, ಪ್ರಕೃತ ಈ ವಿಚಾರದಲ್ಲಿನ ಗೊಂದಲ-ಭಿನ್ನಾಭಿಪ್ರಾಯಗಳಿಗೆ ಅಲ್ಲದೇ ಈ ಗೊಂದಲ ಶ್ರೀ ಕ್ಷೇತ್ರದ ದೈವ-ದೇವರು-ಆಡಳಿತ ಮಂಡಳಿಯು ಹೊಣೆಗಾರರಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *