ವಿಜಯಪುರದಲ್ಲಿ ಶಾಸಕ ಅಶೋಕ್ ಮನಗೂಳಿ ಕಾರಿಗೆ ಅಪಘಾತ: ಸಿಂದಗಿ ಬೈಪಾಸ್ ಬಳಿ ಇನ್ನೋವಾ ಹೈಕ್ರಾಸ್‌ಗೆ ಡಿಕ್ಕಿಯಾದ ಸ್ವಿಫ್ಟ್ ಕಾರು

ವಿಜಯಪುರ: ಜಿಲ್ಲೆಯ ಸಿಂದಗಿ (Sindagi) ಬೈಪಾಸ್ ಬಳಿ ಸಿಂದಗಿ ಶಾಸಕ (Sindagi MLA) ಅಶೋಕ್ ಮನಗೂಳಿ (Ashok Managuli) ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ.

ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ ವೇಳೆ KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿರುವ ಇನ್ನೋವಾ ಹೈಕ್ರಾಸ್ ಕಾರಿಗೆ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಲಬುಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.