Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಾಯಕತ್ವ ಯಾರಿಗೆ? ಪುತ್ರ ಯತೀಂದ್ರರಿಂದ ಮಹತ್ವದ ಹೆಸರು ಪ್ರಸ್ತಾಪ; ‘ಸತೀಶ್‌ ಜಾರಕಿಹೊಳಿ ಈ ಜವಾಬ್ದಾರಿ ನಿಭಾಯಿಸುತ್ತಾರೆ’

Spread the love

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ (Siddaramaiah) ನಂತರ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ (Yathindra Siddaramaiah) ಅವರು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.

ಹೌದು. ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್‌ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಹೇಳಿದ್ದಾರೆ.

ಇವತ್ತು ತಂದೆಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ಈ ರೀತಿ ವೈಚಾರಿಕವಾಗಿ ಪ್ರಗತಿಪರವಾಗಿ ಸಿದ್ದಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶಶನ, ನೇತೃತ್ವ ವಹಿಸಿಕೊಳ್ಳಲು ಒಬ್ಬ ನಾಯಕ ಬೇಕು. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿ ವಹಿಸಿಕೊಳ್ಳಲು ಸಮರ್ಥರಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ದಾಂತದಲ್ಲಿ ನಂಬಿಕೆ ಇಟ್ಟುಕೊಂಡಿರುವ ಎಲ್ಲಾ ರಾಜಕಾರಣಿಗಳಿಗೆ ಮಾದರಿಯಾಗಿ ನಮ್ಮನ್ನು ಮುನ್ನಡೆಸುವ ನಂಬಿಕೆ ಇದೆ. ತತ್ವ ಬದ್ಧತೆ ಇರುವ ನಾಯಕರು ಸಿಗುವುದು ಬಹಳ ಕಷ್ಟ. ಅಂತಹ ಕೆಲಸವನ್ನು ಜಾರಕಿಹೊಳಿ ಮಾಡುತ್ತಿದ್ದಾರೆ. ಆ ಕೆಲಸ ಇದೇ ರೀತಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.


Spread the love
Share:

administrator

Leave a Reply

Your email address will not be published. Required fields are marked *