Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ನಾನು, ಟ್ರಂಪ್, ಮೋದಿ ಒಂದಾದ್ರೆ ಬೆದರಿಕೆ ಹೇಗೆ ?” – ಮೆಲೋನಿ ಪ್ರಶ್ನೆ

Spread the love

ವಾಷಿಂಗ್ಟನ್: ನಾನು, ಟ್ರಂಪ್ (Donald Trump), ಮೋದಿ (Narendra Modi) ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ? ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಎಡಪಂಥೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ.ವಾಷಿಂಗ್ಟನ್‌ನಲ್ಲಿ (Washington) ನಡೆದ ಕನ್ಸರ್ವೇಟಿವ್ ಪೊಲಿಟಿಕಲ್ ಆ್ಯಕ್ಷನ್ ಕಾನ್ಫರೆನ್ಸ್(ಸಿಪಿಎಸಿ)ನಲ್ಲಿ ವಿಡಿಯೋ ಮೂಲಕ ಮಾತನಾಡಿದ ಅವರು, `ನಾನು, ಡೊನಾಲ್ಡ್ ಟ್ರಂಪ್, ಮೋದಿಯಂಥ ಬಲಪಂಥೀಯ ನಾಯಕರು ಬಂದಾದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕೂಗೆಬ್ಬಿಸುತ್ತಾರೆ. ಆದರೆ ಅದೇ ಎಡಪಂಥೀಯ ನಾಯಕರು ಇದೇ ರೀತಿ ಮೈತ್ರಿ ಮಾಡಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಎಡಪಂಥೀಯರು ಟ್ರಂಪ್ ಅವರ ಗೆಲುವಿನಿಂದ ಆತಂಕಕ್ಕೊಳಗಾಗಿದ್ದಾರೆ. ಕನ್ನರ್ವೇಟಿವ್‌ಗಳು ಗೆಲ್ಲುತ್ತಿರುವುದು ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಒಂದಾಗುತ್ತಿರುವುದು ಎಡಪಂಥೀಯರಿಗೆ ವಿಪರೀತ ಹೊಟ್ಟಯುರಿ ಉಂಟು ಮಾಡುತ್ತಿದೆ’ ಎಂದರು.ಬಿಲ್‌ಕ್ಲಿಂಟನ್ ಮತ್ತು ಹಿಂದಿನ ಬ್ರಿಟನ್ ಒರಧಾನಿ ಟೋನಿ ಬ್ಲೇರ್ ಅವರು 90ರ ದಶಕದಲ್ಲಿ ಅಂತಾರಾಷ್ಟ್ರೀಯ ಎಡಪಂಥೀಯ ಉದಾರವಾದಿ ನೆಟ್‌ವರ್ಕ್ ರಚಿಸಿದಾಗ ಅವರನ್ನು `ಮುತ್ಸದ್ದಿಗಳು’ ಎಂದು ಕರೆಯಲಾಯಿತು. ಆದರೆ ಇದೀಗ ಟ್ರಂಪ್, ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಅಥವಾ ಪ್ರಧಾನಿ ಮೋದಿ ಅವರು ಪರಸ್ಪರ ಮಾತುಕತೆ ನಡೆಸಿದರೆ `ಪ್ರಜಾಪ್ರಭುತ್ವಕ್ಕೆ ಬೆದರಿಕೆ’ ಎನ್ನುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *