ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿ ಭೇಟಿ ಬಳಿಕ ಅದೇ ಅದೇ ದಿನ ಒಯೋ ರೂಮ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಹೇಳಿ ಸಾಂಪ್ರಸ್ ಆಂಥೋಣಿ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ
ಮಹಿಳೆಯೊಬ್ಬರು ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾಗಿದ್ದ ಸಾಂಪ್ರಸ್ ಆಂಥೋಣಿ ಎನ್ನುವಾತನ ಜೊತೆ ಒಂದು ವರ್ಷಗಳ ಕಾಲ ಆತ್ಮಿಯವಾಗಿದ್ದರು. ಬಳಿಕ ಅದೇನಾಯ್ತೋ ಏನೋ ಬಳಿಕ ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಇಂದು (ಅಕ್ಟೋಬರ್ 27) ಈ ಕೇಸಿನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಾಟ್ಸಪ್ ನಲ್ಲಿ ಇಬ್ಬರು ಪರಸ್ಪರ ಚಾಟಿಂಗ್ ಮಾಡಿದ್ದು, ಹಾಗೇ ಫೋಟೋ, ವಿಡಿಯೋಗಳನ್ನೂ ವಿನಿಮಯ ಮಾಡಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಳಿಕ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಮಹಿಳೆ ಸಾಂಪ್ರಸ್ ಆಂಥೋಣಿ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿದೆ.
ಇಬ್ಬರ ಚಾಟಿಂಗ್ ಗಂಭೀರವಾಗಿ ಪರಿಗಣಿಸಿದ ಕೋರ್ಟ್
ಇನ್‌ಸ್ಟಾಗ್ರಾಂನಲ್ಲಿ ಇಬ್ಬರು ಕೆಟ್ಟ ಅಭಿರುಚಿಯ ಚಾಟಿಂಗ್ ಮಾಡಿದ್ದರು. ಪರಸ್ಪರ ಫೋಟೋ, ವಿಡಿಯೋಗಳನ್ನೂ ವಿನಿಮಯ ಮಾಡಿಕೊಂಡಿದ್ದರು. ಆದ್ರೆ, ಆರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರು ಇನ್‌ಸ್ಟಾಗ್ರಾಂ ಚಾಟಿಂಗ್ ಪರಿಗಣಿಸಿರಲಿಲ್ಲ. ಇವುಗಳನ್ನು ಪರಿಶೀಲಿಸಿದರೆ ಮಹಿಳೆಯ ದೂರು ಸುಳ್ಳೆಂದು ಸಾಬೀತು. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣ ಹಿನ್ನೆಲೆ
ಸಾಂಪ್ರಸ್ ಆಂಥೋಣಿ ಎನ್ನುವ ಯುವಕ ಹಾಗೂ ಮಹಿಳೆ ಡೇಟಿಂಗ್ ಆ್ಯಪ್ ನಲ್ಲಿ ಪರಸ್ಪರ ಪರಿಚಯವಾಗಿದ್ದು, ಒಂದು ವರ್ಷದವರೆಗೂ ಪರಸ್ಪರ ಚಾಟಿಂಗ್, ಕಾಲ್ನಲ್ಲಿ ಮಾತನಾಡು ಆತ್ಮಿಯರಾಗಿದ್ದರು. ನಂತರ ಒಂದು 2024ರ ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಭೇಟಿಯಾಗಲು ನಿರ್ಧರಿಸಿ ರೆಸ್ಟೋರೆಂಟ್ನಲ್ಲಿ ಊಟ ಮಾಡಿದ್ದರು. ನಂತರ ಯುವಕ ಮಹಿಳೆಯನ್ನು ಓಯೋ ರೂಮ್ಗೆ ಕರೆದೊಯ್ದು ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಮರುದಿನ ಯುವಕ ಆಕೆಯನ್ನು ಅಪಾರ್ಟ್ಮೆಂಟ್ಗೆ ಡ್ರಾಪ್ ಮಾಡಿದ್ದ. ಆದ್ರೆ, ಇಬ್ಬರ ನಡುವೆ ಅದೇನಾಯ್ತೋ ಏನೋ ಮಹಿಳೆ ಅದೇ ದಿನ ವೈದ್ಯಕೀಯ ತಪಾಸಣೆ ಮಾಡಿಸಿ ಸಾಂಪ್ರಸ್ ಆಂಥೋಣಿ ವಿರುದ್ಧ ಕೋಣಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದಳು. ಲೈಂಗಿಕ ಕ್ರಿಯೆಗೆ ಮುಂದಾದಾಗ ಒಪ್ಪಿಗೆ ನಿರಾಕರಿಸಿದ್ದಾಗಿ ಮಹಿಳೆ ದೂರು ನೀಡಿದ್ದು, ಒಪ್ಪಿಗೆ ಸೂಚಿಸಿಲ್ಲವಾದರೂ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪ ಮಾಡಿದ್ದಳು.
ಒಟ್ಟಿನಲ್ಲಿ ಮಹಿಳೆ ಮೊದಲು ಯುವಕನ ಜೊತೆ ಚೆನ್ನಾಗಿದ್ದು, ಆ ನಂತರ ಆತನ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು. ಆದರೆ ಕೋರ್ಟ್ ಯುವಕನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿ ಮಹತ್ವ ತೀರ್ಪು ನೀಡಿದೆ.