ವಿರೋಧ ಪಕ್ಷದ ನಾಯಕಿ ಅತಿಶಿಗೆ ಬಿಜೆಪಿ ತಿರುಗೇಟು

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಅತಿಶಿ ಅವರು ಆರೋಪಿಸಿದ್ದಾರೆ.

ದೆಹಲಿ ಮಾಜಿ ಮುಖ್ಯಮಂತ್ರಿ ಸೋಮವಾರ ತಮ್ಮ ಕೊಠಡಿಯಲ್ಲಿ ಹೊಸದಾಗಿ ಆಯ್ಕೆಯಾದ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಭೇಟಿಯಾದರು. ಸಭೆಯ ನಂತರ ಸಿಎಂ ಪತ್ರಿಕಾಗೋಷ್ಠಿ ನಡೆಸಿ, ಪ್ರಸ್ತುತ ಅಧಿಕಾರಿಗಳು ಪ್ರತಿ ಕಚೇರಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದುಹಾಕಿದ್ದಾರೆ ಎಂದು ಆರೋಪಿಸಿದರು.
“ಭಾರತೀಯ ಜನತಾ ಪಕ್ಷದ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಗೆ ಪುರಾವೆ ನೀಡಲಾಗಿದೆ. ಅರವಿಂದ್ ಕೇಜ್ರಿವಾಲ್ ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ಹಾಕಿದ್ದರು” ಎಂದು ಅತಿಶಿ ಹೇಳಿದರು.
“ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಬಿಜೆಪಿ ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದುಹಾಕಿದೆ. ಇದು ಬಿಜೆಪಿ ದಲಿತ ವಿರೋಧಿ, ಸಿಖ್ ವಿರೋಧಿ ಪಕ್ಷ ಎಂಬುದನ್ನು ತೋರಿಸುತ್ತದೆ” ಎಂದು ವಾಗ್ದಾಳಿ ನಡೆಸಿದರು.
ಏತನ್ಮಧ್ಯೆ, ಸೋಮವಾರ ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ, ಮಹಿಳಾ ಸಮ್ಮಾನ್ ಯೋಜನೆಗೆ ಸಂಬಂಧಿಸಿದ ಭರವಸೆಯನ್ನು ಈಡೇರಿಸದಿರುವ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ದೆಹಲಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ನೀಡಿದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಅತಿಶಿ ಒತ್ತಿ ಹೇಳಿದರು.