Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಾರ್ಮಾಡಿ ಘಾಟ್​ ಕೆಎಸ್‌ಆರ್‌ಟಿಸಿ ಬಸ್‌ ಸ್ಟೇರಿಂಗ್ ಕಟ್

Spread the love

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *