Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೆಹಲಿ ಏರ್‌ಪೋರ್ಟ್‌ನಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ: ATC ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರ ಪರದಾಟ

Spread the love

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGIA) ಏರ್ ಟ್ರಾಫಿಕ್ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ (ಇಂದು) ಬೆಳಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 1,500ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ. 

ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲ‌ರ್ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ತಾಂತ್ರಿಕ ತಂಡ ಈಗಾಗಲೇ ದೋಷ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಲಭ್ಯವಿರುವ ಮಾಹಿತಿಯೊಂದಿಗೆ ಸಿಬ್ಬಂದಿ, ವಿಮಾನ ಮಾಹಿತಿಯನ್ನ ಬರಹದ ಮೂಲಕ ಸಿದ್ದಪಡಿಸುತ್ತಿರುವ ಕಾರಣ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಹೀಗಾಗಿ ವಿಮಾನ ಹಾರಾಟ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ.


Spread the love
Share:

administrator

Leave a Reply

Your email address will not be published. Required fields are marked *