Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ! ವಿದ್ಯಾರ್ಥಿಗಳಿಗೆ ಈ ನಿಮಯ ಖಡ್ಡಾಯ.

Spread the love

ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ.


ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಮಾರ್ಚ್ 1 ರಿಂದ 20 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ, ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.


ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ.

1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.

2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ

3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.

4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

5)ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.


Spread the love
Share:

administrator

Leave a Reply

Your email address will not be published. Required fields are marked *