Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಯರ್ ಬಾಟಲಿಯಿಂದ ಹೊಡೆದು ಸ್ನೇಹಿತನ ಕೊಲೆ; ಮೂವರು ಆರೋಪಿಗಳ ಬಂಧನ

Spread the love

ಬೆಂಗಳೂರು : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರ ನಿವಾಸಿ ಸುರೇಶ್ ಎಂಬುವವರನ್ನು ಅವರ ಸ್ನೇಹಿತರು ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದು, ಹಣಕಾಸು ವ್ಯವಹಾರವು ಜಗಳಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ತ್ಯಾಗರಾಜನಗರದ ನಿವಾಸಿ ಸುರೇಶ್ (45) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತರಾದ ವೇಲು, ಸ್ಟೀಫನ್‌ ಹಾಗೂ ಪ್ರದೀಪ್ ನನ್ನು ಅರೆಸ್ಟ್ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿಗಳು, ಸುರೇಶ್‌ಗೆ ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *