Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ರೆಡಿಯಾಲಜಿಸ್ಟ್

Spread the love

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನಲ್ಲಿ (Anekal) ನಡೆದಿದೆ.

ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *