ಅಕ್ರಮ ಮಾದಕ ವಸ್ತು ವ್ಯವಹಾರಗಳ ವಿರುದ್ಧ ಅಬಕಾರಿ ಇಲಾಖೆ ಕಾರ್ಯಾಚರಣೆ – 21 ಮಂದಿ ಬಂಧನ

ಮಂಗಳೂರು: ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಜನವರಿ ಮತ್ತು ಫೆಬ್ರವರಿಯಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 21 ಪ್ರಕರಣ ದಾಖಲಿಸಿ 21 ಮಂದಿಯನ್ನು ಬಂಧಿಸಿದ್ದಾರೆ.
ಅಬಕಾರಿ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ್ “ಜನವರಿಯಲ್ಲಿ ಮಾದಕ ವಸ್ತುಗಳ ಸೇವನೆಯ 7 ಪ್ರಕರಣ ದಾಖಲಿಸಿ 7 ಆರೋಪಿಗಳು ಮತ್ತು ಫೆಬ್ರವರಿಯಲ್ಲಿ 14 ಮಾದಕ ವಸ್ತುಗಳ ಸೇವನೆ ಪ್ರಕರಣ ದಾಖಲಿಸಿ 14 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.
