ಪುತ್ತೂರು ಬಳಿ ಕೆಎಸ್ಆರ್‌ಟಿಸಿ ಬಸ್‌ಗೆ ಆಟೋ ಡಿಕ್ಕಿ ; ಪ್ರಯಾಣಿಕರಿಬ್ಬರು ಸಾವು, ಚಾಲಕನ ಸ್ಥಿತಿ ಗಂಭೀರ.

ಪುತ್ತೂರು : ಕೆಎಸ್ಆರ್‌ಟಿಸಿ ಬಸ್‌ಗೆ ಆಟೋ ರಿಕ್ಷಾವೊಂದು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್‌ಗೆ ಪುತ್ತೂರಿನಿಂದ ಕಬಕದ ಕಡೆಗೆ ಬರುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋರಿಕ್ಷಾ ಪಲ್ಟಿಯಾಗಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಕೆದಂಬಾಡಿ ಗ್ರಾಮದ ಮೊಹಮ್ಮದ್ ಎಂಬವರ ಎರಡನೇ ಪತ್ನಿ ಜಮೀಲಾ (49) ಮತ್ತು ಅವರ ಮೊಮ್ಮಗ ತಪ್ಸಿಬ್(5) ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಸ್ತೆಯಲ್ಲಿ ಚಲಿಸುತ್ತಿರುವ ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ನಡುವಿನಲ್ಲಿಯೇ ಮುಂಭಾಗದಿಂದ ಆಗಮಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ಸಿನ ಎದುರು ಭಾಗಕ್ಕೆ ಉರುಳಿ ಬೀಳುವ ದೃಶ್ಯವು ಪಕ್ಕದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.