Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಡ್ಡಾದಿಡ್ಡಿ ಚಾಲನೆ ಪ್ರಶ್ನಿಸಿದ್ದಕ್ಕೆ ಟೆಕ್ಕಿಯಿಂದ ಚಾಕು ಇರಿತ

Spread the love

ಚಿಕ್ಕಬಳ್ಳಾಪುರ: ಹೈವೇಯಲ್ಲಿ ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಮಾಡುತ್ತಿದ್ದಿದ್ದನ್ನು ಪ್ರಶ್ನೆ ಮಾಡಿದಕ್ಕೆ ಬೈಕ್‌ ಸವಾರನಿಗೆ ಮಹಿಳಾ ಟೆಕ್ಕಿ (Techie) ಚಾಕುವಿನಿಂದ ಇರಿದಿರುವಂತಹ (Stab) ಘಟನೆ ನಗರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿಯಿಂದ ಕೃತ್ಯವೆಸಗಲಾಗಿದೆ. ಬೈಕ್ ಸವಾರ ನರಸಿಂಹ ಮೂರ್ತಿ ಕೈಗೆ ಗಾಯವಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಾಲನೆ

ಮೂಲತಃ ತಮಿಳುನಾಡಿನವರಾದ ರಿಂಬಿಕಾ, ಬೆಂಗಳೂರಿನಲ್ಲಿ ಟಿಕ್ಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಇಂದು ತಮ್ಮ ತಮಿಳುನಾಡು ನೊಂದಣಿಯ ಸ್ಕೂಟಿ ಏರಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಕಡೆಗೆ ಬಂದು ವಾಪಾಸ್ ಬೆಂಗಳೂರಿನತ್ತ ತೆರಳುತ್ತಿದ್ದರು. ಆದರೆ ಅದ್ಯಾಕೋ ಏನೋ ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಓಡಿಸುತ್ತಾ ಹಿಂದೆ ಬರ್ತಿದ್ದ ಸವಾರರಿಗೆ ಇರುಸು ಮುರುಸು ಉಂಟು ಮಾಡಿದ್ದಾರೆ.

ಚಿಕ್ಕಬಳ್ಳಾಪುರದ ಸೇತುವೆ ಕೆಳಗಡೆ ಸ್ಕೂಟಿ ನಿಲ್ಲಿಸಿ ನಿಂತಿದ್ದ ರಿಂಬಿಕಾರನ್ನು ಹಿಂದೆ ಬರ್ತಿದ್ದ ಬೈಕ್ ಸವಾರ ನಿಖಿಲ್ ಹಾಗೂ ನರಸಿಂಹಮೂರ್ತಿ ಅವರು ಪ್ರಶ್ನೆ ಮಾಡಿದ್ದಾರೆ. ಯಾಕಮ್ಮ ಗಾಡಿ ಅಡ್ಡಾದಿಡ್ಡಿ ಓಡಿಸ್ತಿದ್ದೀಯಾ? ಅಂದಿದ್ದೇ ತಡ ಆಕೆ ಬಳಿ ಇದ್ದ ಫೋಲ್ಡೆಡ್ ಚಾಕುವಿನಿಂದ ಅಟ್ಯಾಕ್ ಮಾಡಿದ್ದಾರೆ. ಇದ್ರಿಂದ ಬೈಕ್ ಸವಾರ ನಿಖಿಲ್ ಕೈಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಹಿಂಬದಿ ಸವಾರ ನರಸಿಂಹಮೂರ್ತಿಗೂ ಗಾಯವಾಗಿದೆ. ರಿಂಬಿಕಾ ಚಾಕುವಿನಿಂದ ಅಟ್ಯಾಕ್ ಮಾಡ್ತಿದ್ದಂತೆ ನಿಖಿಲ್ ಸಹ ವಾಪಸ್​​ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯಗಳು ಸ್ಥಳೀಯ ಹೋಟೆಲ್​ವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ಘಟನೆ ನಡೆಯುತ್ತಿದ್ದಂತೆ ಇತರೆ ವಾಹನ ಸವಾರರು, ಸ್ಥಳೀಯರು ಜಮಾಯಿಸಿ ಪೊಲೀಸರನ್ನ ಕರೆಸಿ ಆಕೆಯನ್ನ ವಶಕ್ಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಯುವಕ ನಿಖಿಲ್ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ರಿಂಬಿಕಾರನ್ನ ವಿಚಾರಣೆ ನಡೆಸಿದ್ದಾರೆ. ಯುವಕರು ನನ್ನನ್ನ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತನೆ ಮಾಡಿದರು. ಅದಕ್ಕೆ ನಾನು ಚಾಕುವಿನಿಂದ ಅಟ್ಯಾಕ್ ಮಾಡಿದೆ ಎಂದು ರಿಂಬಿಕಾ ಹೇಳಿದ್ದಾರೆ.

ಸಾಲದು ಅಂತ ಪೊಲೀಸರ ತನಿಖೆಗೆ ಸಹಕರಿಸದೆ ಪೊಲೀಸ್​ ಠಾಣೆಯಿಂದ‌ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಮಾನಸಿಕವಾಗಿ ಸದೃಢವಾಗಿರದ ರಿಂಬಿಕಾ, ಪೊಲೀಸರಿಗೆ ಸಹಕರಿಸದೆ ಚಿತ್ರವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಬುದ್ಧಿವಾದ ಹೇಳಿದಕ್ಕೆ ಚಾಕು ತೆಗೆದು ಹಲ್ಲೆ ಮಾಡುವ ಮೂಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *