ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ 2 ಮೊಬೈಲ್ ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ (Electrical Short Circuit) 2 ಮೊಬೈಲ್ ಅಂಗಡಿಗಳಿಗೆ ಬೆಂಕಿ ಬಿದ್ದು ಸುಟ್ಟು ಭಸ್ಮವಾದ ಘಟನೆ ಹಾವೇರಿ ಬಸ್ ನಿಲ್ದಾಣ ಬಳಿ ನಡೆದಿದೆ


ರಫೀಕ್ ಬೋರ್ಗಲ್, ಸಾಹಿಲ್ ಮಾಣಿಕ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಗಳು (Mobile Shops) ಸುಟ್ಟು ಕರಕಲಾಗಿವೆ

ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ಗಳು ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.