Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಲಬುರಗಿ ಅಪಘಾತ ಐಎಎಸ್ ಅಧಿಕಾರಿ ಸ್ನೇಹಿತ ಈರಣ್ಣ ಶಿರಸಂಗಿ ನಿಧನ

Spread the love

ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಮಹಾಂತೇಶ್ ಬೀಳಗಿ ಸ್ನೇಹಿತ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊರ್ವ ವ್ಯಕ್ತಿ, ಮಹಾಂತೇಶ್ ಬೀಳಗಿ ಸ್ನೇಹಿತ ಈರಣ್ಣ ಶಿರಸಂಗಿ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಶಿರಸಂಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಹಾಂತೇಶ್ ಬೀಳಗಿ ಸೇರಿ ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *