Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮದೀನಾ-ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ; ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತ!

Spread the love

ಹೈದರಾಬಾದ್: ಮದೀನಾದಿಂದ (Madinah) ಹೈದರಾಬಾದ್‌ಗೆ (Hyderabad) ಬರುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ಬಾಂಬ್‌ ಬೆದರಿಕೆ (Bomb Threat) ಬಂದಿದ್ದು, ವಿಮಾನವನ್ನು ಅಹಮದಾಬಾದ್‌ (Ahmedabad) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

180 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತು ಬರುತ್ತಿದ್ದ 6E58 ವಿಮಾನ ಮಧ್ಯಾಹ್ನ 12:30 ರ ಸುಮಾರಿಗೆ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ. ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಾಗ ವಿಮಾನವು ಆಕಾಶದಲ್ಲೇ ಇತ್ತು. ಬಳಿಕ ಅಹಮದಾಬಾದ್ ಹತ್ತಿರದ ವಿಮಾನ ನಿಲ್ದಾಣವಾಗಿದ್ದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ವಿಮಾನವನ್ನು ಅಲ್ಲಿ ಲ್ಯಾಂಡ್‌ ಮಾಡುವಂತೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ

ಲ್ಯಾಂಡಿಂಗ್ ನಂತರ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ, ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ. ಈ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಮದೀನಾದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲಜೀಜ್ ವಿಮಾನ ನಿಲ್ದಾಣದಿಂದ ಬೆಳಗಿನ ಜಾವ 2:10 ಕ್ಕೆ ಹೊರಡಬೇಕಿದ್ದ ವಿಮಾನವು ಬೆಳಿಗ್ಗೆ 5:29ಕ್ಕೆ ಹೊರಟಿತ್ತು. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 12:30ರ ಸುಮಾರಿಗೆ ಲ್ಯಾಂಡ್‌ ಆಗುವ ನಿರೀಕ್ಷೆಯಿತ್ತು.

ಹೈದರಾಬಾದ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳ ಸಾಮೂಹಿಕ ರದ್ದತಿಯ ನಡುವೆ ಈ ಘಟನೆ ನಡೆದಿದೆ. ಮದೀನಾ-ಹೈದರಾಬಾದ್ ವಿಮಾನ ಬೇರೆಡೆಗೆ ತಿರುಗಿರುವುದು ಮೂರು ದಿನಗಳ ಅಂತರದಲ್ಲಿ ಎರಡನೇ ಘಟನೆಯಾಗಿದೆ. ಡಿಸೆಂಬರ್ 2 ರಂದು, ಹೈದರಾಬಾದ್ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಕುವೈತ್‌ನಿಂದ ಹೈದರಾಬಾದ್‌ಗೆ ಹೋಗುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈಗೆ ತಿರುಗಿಸಲಾಗಿತ್ತು


Spread the love
Share:

administrator

Leave a Reply

Your email address will not be published. Required fields are marked *