Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದತ್ತ ಜಯಂತಿ ಬ್ಯಾನರ್ ವಿಚಾರ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆ

Spread the love

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಎಂಬಾತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಆರೋಪಿ ಸಂಜಯ್ ಮತ್ತು ಗಣೇಶ್ ಗುಂಪಿನ ನಡುವೆ ಗಲಾಟೆಯಾಗಿತ್ತು. ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿತ್ತು. ಸಖರಾಯಪಟ್ಟಣದ ಕಲ್ಮರಡಿ ರಸ್ತೆಯ ಬಳಿ ಗಣೇಶ್ ಮೇಲೆ ದಾಳಿ ಮಾಡಲಾಗಿತ್ತು. ಗಣೇಶ್ ಮೇಲೆ ಆರೋಪಿ ಸಂಜಯ್ ಮಚ್ಚಿನಿಂದ ದಾಳಿ ಮಾಡಿದ್ದ. ದಾಳಿಯಿಂದ ತಪ್ಪಿಸಿಕೊಳ್ಳಲು ಗಣೇಶ್ ದೊಣ್ಣೆಯಿಂದ ಪ್ರತಿದಾಳಿ ನಡೆಸಿದ್ದರು. ಆರೋಪಿಗಳಾದ ಸಂಜಯ್ ಹಾಗೂ ಭೂಷಣ್ ಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಣೇಶ್ ಹತ್ಯೆಯಲ್ಲಿ 8 ಜನರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಮಿಥುನ್ ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *