Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕದಲ್ಲಿ BPL ಕಾರ್ಡ್ ಅರ್ಜಿಗಳು ಬಾಕಿ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆ

Spread the love

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವ BPL ರೇಷನ್​​ ಕಾರ್ಡುಗಳ ಅರ್ಜಿಗಳು ಕರ್ನಾಟಕದಲ್ಲಿ ಬಾಕಿ ಬಿದ್ದಿವೆ. ಸುಮಾರು 3,22,468 ಅರ್ಜಿಗಳು ಹಾಗೇ ಉಳಿದುಕೊಂಡಿದ್ದು, ಆ ಪೈಕಿ ಬಹುತೇಕ ಅರ್ಜಿಗಳು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳದ್ದಾಗಿದ್ದರೆ ಬೆಂಗಳೂರಿನ ಅರ್ಜಿಗಳೂ ಹೆಚ್ಚಿನ ಸಂಖ್ಯೆಯಲ್ಲಿವೆ.

ಬೆಳಗಾವಿಯ ಅತಿ ಹೆಚ್ಚು ಅರ್ಜಿಗಳು ಬಾಕಿ

ಅಂಕಿಅಂಶಗಳ ಪ್ರಕಾರ, ಬೆಳಗಾವಿ 39,019 ಬಾಕಿ ಅರ್ಜಿಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ನಂತರ ಕಲಬುರಗಿ 36,037, ವಿಜಯಪುರ 24,293, ರಾಯಚೂರು 18,111, ಬೆಂಗಳೂರು 18,035, ಬೀದರ್​ 17,671, ಬಾಗಲಕೋಟೆ 13,658, ಧಾರವಾಡ 12,337, ಕೊಪ್ಪಳ 11,446 ಮತ್ತು ಬಳ್ಳಾರಿಯ 10,709 ಅರ್ಜಿಗಳು ಬಾಕಿ ಉಳಿದಿವೆ.

ಅರ್ಜಿಗಳ ಬಾಕಿಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕಿಡ್ನಿ ಸಂಬಂಧಿ ಸಮಸ್ಯೆಗಳಿರುವ ಫಲಾನುಭವಿಗಳು ಸಹಾಯಧನ ಮತ್ತು ವೈದ್ಯಕೀಯ ನೆರವನ್ನು ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ತಾತ್ಕಾಲಿಕವಾಗಿ ಯಾವುದಾದರೂ BPL ಕಾರ್ಡ್ NPHH ಸ್ಥಾನಕ್ಕೆ ವರ್ಗಾಯಿಸಲ್ಪಟ್ಟಿದ್ದರೆ, ಯೋಗ್ಯ ಫಲಾನುಭವಿಗಳು 45 ದಿನಗಳ ಒಳಗೆ ತಹಶೀಲ್ದಾರ್‌ಗೆ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದು. ಪರಿಶೀಲನೆಯ ನಂತರ ಮೂಲ BPL ಕಾರ್ಡ್ ಸೌಲಭ್ಯವನ್ನು ಅವರಿಗೆ ನೀಡಲಾಗುತ್ತದೆ ಎಂದು ಸಚಿವ ಕೆ. ಹೆಚ್. ಮುನಿಯಪ್ಪ ಈಗಾಗಲೇ ತಿಳಿಸಿದ್ದಾರೆ. ಅಲ್ಲದೆ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಿಸುತ್ತಿರುವವರಿಗಾಗಿ, ತಕ್ಷಣವೇ ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಆನ್‌ಲೈನ್ ಮೂಲಕವೂ BPL ಕಾರ್ಡ್‌ಗೆ ಅರ್ಜಿ ಸಲ್ಲಿಸುವ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ.

ಯಾರೆಲ್ಲ BPL ಕಾರ್ಡ್​​ ಪಡೆಯಲು ಅರ್ಹರು?

2017ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾನದಂಡಗಳ ಪ್ರಕಾರ, ಬಿಪಿಎಲ್​ ಕಾರ್ಡ್​ ಪಡೆಯಲು ಹಲವು ನಿಬಂಧನೆಗಳನ್ನು ಹೇರಲಾಗಿದೆ. ಸರ್ಕಾರಿ ನೌಕರಿಯಲ್ಲಿರಬಾರದು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಭೂಮಿ, ನಗರ ಪ್ರದೇಶದಲ್ಲಿ 1 ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ಭೂಮಿ ಹೊಂದಿರಬಾರದು, ನಾಲ್ಕು ಚಕ್ರದ ವಾಹನ ಇರಬಾರದು, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಮೀರಬಾರದು ಎಂದು ತಿಳಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *