ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಸಾರ್ವಜನಿಕವಾಗಿ ಧರ್ಮದೇಟು!

ಹುಬ್ಬಳ್ಳಿ: ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
