Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ಪೊಲೀಸ್ ಠಾಣೆ: ಮಹಿಳಾ ಪೇದೆಗೆ ಠಾಣೆಯಲ್ಲೇ ಸೀಮಂತ ಮಾಡಿದ ಸಿಬ್ಬಂದಿ

Spread the love

ಆನೇಕಲ್: ಪರಪ್ಪನ ಅಗ್ರಹಾರ (Parappana Agrahara) ಪೋಲಿಸ್ ಠಾಣೆಯಲ್ಲಿ ಮಹಿಳಾ ಪೇದೆಗೆ (Lady Constable) ಠಾಣೆಯ ಸಿಬ್ಬಂದಿ ಸೇರಿ ಸೀಮಂತ (Baby Shower) ಮಾಡಿದ್ದಾರೆ.

ತುಂಬು ಗರ್ಭಿಣಿಯಾಗಿದ್ದ ಉಮಾಗೆ ಠಾಣೆಯಲ್ಲೇ ಸೀಮಂತ ಮಾಡಿದ್ದು, ಠಾಣೆಯಲ್ಲಿನ ಸಿಬ್ಬಂದಿ ವರ್ಗ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಠಾಣೆಯಲ್ಲಿ ನಡೆದ ಈ ಕಾರ್ಯಕ್ರಮ ಭಾವನಾತ್ಮಕವಾದ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತೀಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು

ಒಂದು ಕ್ಷಣ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಇದೇ ಸಂದರ್ಭದಲ್ಲಿ ಗರ್ಭಿಣಿ ಉಮಾ ಮಾತನಾಡಿ, ನನ್ನ ತವರು ಮನೆಯಿಂದ ಮಾಡುವ ಕಾರ್ಯಕ್ರಮವನ್ನು ನಾನು ಕೆಲಸ ಮಾಡುವ ಪೊಲೀಸ್ ಠಾಣೆಯಲ್ಲಿ ಮಾಡಿರುವುದು ಬಹಳ ಖುಷಿ ತಂದುಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *