Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಪ್ರಕರಣ : 6.36 ಕೋಟಿ ರು. ದಂಡ

Spread the love

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರು.ಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ.ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರು.ಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ.

ಸೆಸ್ಕ್‌ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್ ಜಾಗೃತ ದಳದ ಪೊಲೀಸ್ ಅಧೀಕ್ಷಕಿ ಸವಿತಾ ಹೂಗಾರ ಅವರ ನೇತೃತ್ವದಲ್ಲಿ ಜಾಗೃತ ದಳದ ಅಧಿಕಾರಿ ಹಾಗೂ ಸಿಬ್ಬಂದಿ, ಸೆಸ್ಕ್‌ವಿಭಾಗ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಆ ಮೂಲಕ ಅಕ್ರಮವಾಗಿ ವಿದ್ಯುತ್‌ ಕಳ್ಳತನ, ವಿದ್ಯುತ್‌ ದುರುಪಯೋಗ ಮಾಡಿದವರ ವಿರುದ್ಧ ಕ್ರಮಕೈಗೊಂಡು, ಪ್ರಕರಣ ದಾಖಲಿಸಲಾಗಿದೆ.

ಸೆಸ್ಕ್ ಜಾಗೃತದಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಗೃಹ, ವಾಣಿಜ್ಯ, ಕೈಗಾರಿಕೆ, ತಾತ್ಕಾಲಿಕ ಸ್ಥಾವರ ಮತ್ತು ಇತರ ಕಡೆಗಳಲ್ಲಿ 5716 ಸ್ಥಾವರಗಳನ್ನು ಜಾಗೃತದಳದ ಅಧಿಕಾರಿಗಳು ಪರಿಶೀಲಿಸಿದ್ದು, ಈ ವೇಳೆ 1312 ವಿದ್ಯುತ್ ಕಳ್ಳತನ ಮತ್ತು ದುರುಪಯೋಗ ಪ್ರಕರಣ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಗಳಿಂದ ಒಟ್ಟು 6,36,72,607 ರು. ದಂಡ ವಿಧಿಸಿದ್ದು, ಈ ಅವಧಿಯಲ್ಲಿ ಹಿಂದಿನ ಪ್ರಕರಣಗಳು ಸೇರಿ 5,94,89,898 ರು. ದಂಡ ವಸೂಲಿ ಮಾಡಲಾಗಿದೆ.

ಮೀಟರ್‌ ಪರಿಶೀಲನೆ ವಿಭಾಗದಿಂದ ವಿವಿಧ ವಿಭಾಗಗಳಲ್ಲಿ ಒಟ್ಟು 23,014 ಸ್ಥಾವರಗಳ ರೇಟಿಂಗ್‌ ಮಾಡಿ, ಲೋಪಗಳಿರುವ ಕಡೆಗಳಲ್ಲಿ ಗುರುತಿಸಲಾಗದ ಪ್ರಕರಣ ದಾಖಲಿಸಿ 12,37,56,660 ರು. ದಂಡ ವಿಧಿಸಲಾಗಿದೆ.

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆ ಅಡಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದ್ದು, ವಿದ್ಯುತ್ ಕಳ್ಳತನ ಮಾಡುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ವಿದ್ಯುತ್ ಕಳ್ಳತನದ ಬಗ್ಗೆ ಮಾಹಿತಿ ಇದ್ದಲ್ಲಿ ಈ ಕೆಳಕಂಡ ಸಂಖ್ಯೆಗಳಿಗೆ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸೆಸ್ಕ್‌ಜಾಗೃತ ದಳದ ಇಇ ಸಿ. ಉಮೇಶ್‌ಹಾಗೂ ಪೊಲೀಸ್‌ಉಪ ಅಧೀಕ್ಷಕ ಆನಂದಮೂರ್ತಿ ತಿಳಿಸಿದ್ದಾರೆ.

ಸೆಸ್ಕ್‌ ಜಾಗೃತ ದಳ:

ಮೈಸೂರು ಜಿಲ್ಲೆ: ಪೊಲೀಸ್‌ ಇನ್ಸ್‌ಪೆಕ್ಟರ್‌ ಮೊ. 9448994736, ಎಇಇ ಮೊ. 9448994737, ಮಂಡ್ಯ ಜಿಲ್ಲೆ: ಪೊಲೀಸ್‌ ಇನ್ಸ್‌ಪೆಕ್ಟರ್‌ ಮೊ. 9448994919, ಎಇಇ ಮೊ. 9448994863, ಹಾಸನ ಜಿಲ್ಲೆ: ಪೊಲೀಸ್‌ ಇನ್ಸ್‌ಪೆಕ್ಟರ್‌ ಮೊ. 9448994935, ಎಇಇ ಮೊ. 9448994936, ಚಾಮರಾಜನಗರ ಜಿಲ್ಲೆ ಪೊಲೀಸ್‌ಇನ್ಸ್‌ಪೆಕ್ಟರ್‌ ಮೊ. 9449598689, ಎಇಇ ಮೊ. 9448994926, ಕೊಡಗು ಜಿಲ್ಲೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಮೊ. 9449598620 ಮತ್ತು ಎಇಇ ಮೊ. 9448499902 ಸಂಪರ್ಕಿಸಬಹುದು.


Spread the love
Share:

administrator

Leave a Reply

Your email address will not be published. Required fields are marked *