Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

2025-26 ಕರ್ನಾಟಕ ಬಜೆಟ್: ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ, ಮಹಿಳಾ ಕಲ್ಯಾಣಕ್ಕೆ ಭಾರೀ ಅನುದಾನ

Spread the love

ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದುಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ:
2025-26ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದೆ. ವಿಧಾನಸಭೆಯಲ್ಲಿಂದು ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಾರಿ ಆಯವ್ಯಯ ಮಂಡಿಸುತ್ತಿದ್ದಾರೆ.ಇದಕ್ಕೂ ಮುನ್ನ ಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿದ ಹಣಕಾಸು ಇಲಾಖೆಯ ಅಧಿಕಾರಿಗಳು, ಸಿದ್ದರಾಮಯ್ಯನವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು. ಬಜೆಟ್​ನ ಕ್ಷಣಕ್ಷಣದ ಮಾಹಿತಿ ಈಟಿವಿ ಭಾರತದಲ್ಲಿ ಲಭ್ಯ.

ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ
ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ 5 ಕೋಟಿ ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ, ಜಿಪಿಎಸ್ ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಕೇಂದ್ರ ಸ್ಥಾಪನೆ.ಅನ್ನಭಾಗ್ಯ ಯೋಜನೆ ಸಗಟು ಲಾಭಾಂಶ ಪ್ರತಿ ಕ್ವಿಂಟ್ವಾಲ್ ಗೆ 35 ರೂ. ನಿಂದ 45 ರೂ. ಹೆಚ್ಚಳ
ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ
8,833 ಕೋಟಿ ವೆಚ್ಚದಲ್ಲಿ 100 ಹೊಸ ಉಪಕೇಂದ್ರಗಳ ಸ್ಥಾಪನೆ


ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ:

MSME ಘಟಕಗಳಿಗೆ ನೆರವು ನೀಡಲು 185 ಕೋಟಿ ರೂ.
90,645 ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ರಿಯಾಯಿತಿ ವಿದ್ಯುತ್ ಸವಲತ್ತು ಒದಗಿಸಲು 100 ಕೋಟಿ ರೂ.
ಡೀಪ್ ಟೆಕ್ ಅಭಿವೃದ್ಧಿಗಾಗಿ 100 ಕೋಟಿ ರೂ. ಕಾರ್ಪಸ್ ನಿಧಿ ಹಾಗೂ 300 ಕೋಟಿ ರೂ. ಫಂಡ್ ಆಫ್ ಫಂಡ್ ಸ್ಥಾಪನೆ
ಬೆಂಕಿಗೆ ಹಾನಿಯಾದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್‌ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಣೆ
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ. ಅಜೀಂ ಪ್ರೇಮ್​ಜಿ ಸಹಯೋಗದಲ್ಲಿ ವಾರದಲ್ಲಿ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾವುದು ಎಂದು ಸಿಎಂ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆ
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಬ್ಯಾಸಕ್ಕೆ ಪ್ರೋತ್ಸಾಹಿಸಲು ಕಟ್ಟಡ ರಾಜ್ಯದ 31 ಜಿಲ್ಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೂ ವಸತಿ ಶಾಲೆಗಳ ಪ್ರಾರಂಭಕ್ಕೆ 750 ಕೋಟಿ ರೂ.ಗಳ ನಿಗದಿ.
ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ, ವೈದ್ಯಕೀಯ ಸೌಲಭ್ಯಕ್ಕಾಗಿ ನೀಡುತ್ತಿರುವ ಸಹಾಯಧನ ದ್ವಿಗುಣ
ಸಹಜ ಮರಣ ಹೊಂದಿದಲ್ಲಿ 1.5 ಲಕ್ಷ ಪರಿಹಾರ. ಕೆಲಸದ ಸ್ಥಳದಲ್ಲಿ ಮರಣಹೊಂದಿದರೆ 8 ಲಕ್ಷ ರೂ.ಗಳ ಪರಿಹಾರ ಘೋಷಣೆ.
ಆಯುಷ್ಮಾನ್​ ಭಾರತ್​ ಆರೋಗ್ಯ ಯೋಜನೆಯಡಿ 5 ಲಕ್ಷ ಮಿತಿ ಪೂರ್ಣಗೊಂಡಲ್ಲಿ ಹೃದ್ರೋಗ, ಕ್ಯಾನ್ಸ್​ರಗೆ 5 ಲಕ್ಷ ರೂ. ಇತರೆ ಕಾಯಿಲೆಗಳಿಗೆ 2 ಲಕ್ಷ ರೂ.ಗಳನ್ನು ಪಾವತಿ.
ರಾಜ್ಯ ವಿಮಾ ಆಸ್ಪತ್ರೆ(ಇಎಸ್​ಐ) ಮೂಲಸೌಲಭ್ಯ ಹೆಚ್ಚಳ ಮಾಡಲು 51 ಕೋಟಿ ರೂ.ಗಳ ನಿಗದಿ.

ಬೆಂಗಳೂರು ನಗರಾಭಿವೃದ್ಧಿ
ಬೆಂಗಳೂರು ನಗರ ಮೂಲಸೌಕರ್ಯ ಅಭಿವೃದ್ಧಿಗೆ ನೀಡುತ್ತಿದ್ದ 3 ಸಾವಿರ ಕೋಟಿಯಿಂದ 7 ಸಾವಿರ ಕೋಟಿ ಅನುದಾನ ಹೆಚ್ಚಳ
40 ಸಾವಿರ ಕೋಟಿ ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ- ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ ನಿರ್ಮಿಸಲು ಪ್ರಸ್ತಕ ಸಾಲಿನಲ್ಲಿ 19 ಸಾವಿರ ಕೋಟಿ ಮೀಸಲು
ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 8.916 ಕೋಟಿ ರೂ.ವೆಚ್ಚದಲ್ಲಿ 40.50 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಫ್ಲೇಓವರ್ ರಸ್ತೆ ನಿರ್ಮಾಣ
ಬಿಬಿಎಂಪಿ ವ್ಯಾಪ್ತಿಯ 460 ಕಿ.ಮೀ.ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಜಾಲ ನಿರ್ಮಾಣಕ್ಕೆ 660 ಕೋಟಿ ಮೀಸಲು
ರಾಜಧಾನಿಯಲ್ಲಿ 120 ಕಿ.ಮೀ. ಉದ್ದದ ಮೇಲುಸೇತುವೆ ಹಾಗೂ ಗ್ರೇಡ್ ಸಪರೇಟರ್ ನಿರ್ಮಾಣಕ್ಕೆ ಒತ್ತು.


ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆ ಜಾರಿ
ನಗರದ ಒಳಚರಂಡಿ ಜಾಲ ಹಾಘೂ ಎಸ್ ಟಿಪಿ ನಿರ್ಮಾಣಕ್ಕೆ ಬಿಬಿಎಂಪಿ ಹಾಗೂ ಬೆಂಗಳೂರು ಜಲಮಂಡಳಿಗೆ 3 ಸಾವಿರ ಕೋಟಿ ಆರ್ಥಿಕ ನೆರವು
ಎಸ್ ಟಿಪಿ ಘಟಕಗಳ ತ್ಯಾಜ್ಯ ಬಳಸಿ ಬಯೋಗ್ಯಾಸ್ ಆಧಾರಿತ ಮತ್ತು ಕಾರ್ಬನ್ ಕ್ರೆಡಿಟ್ ಉಪಯೋಗ ಪಡೆಯಲು ಪಿಪಿಪಿ ಮಾದರಿ ಯೋಜನೆ ಜಾರಿ
ಮೆಟ್ರೊ ಜಾಲವನ್ನ ದೇವನಹಳ್ಳಿಯವರೆಗೆ ವಿಸ್ತರಣೆ
ಕಾವೇರಿ ಹಂತ-6 ಅನುಷ್ಠಾನಕ್ಕಾಗಿ ವಿಸ್ಕೃತ ಯೋಜನಾ ವರದಿಗೆ ತಯಾರಿಗೆ ಅಸ್ತು.

ರೇಷ್ಮೆ ಕೃಷಿಗೆ ಉತ್ತೇಜನ
ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆ.
ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಗೂಡಿನ ಮೊದಲ ಹಂತದ ಕಾಮಗಾರಿ ಪೂರ್ಣ. ಪ್ರಸ್ತಕ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗೆ 250 ಕೋಟಿ ರೂ. ವೆಚ್ಚ.
ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ನಬಾರ್ಡ್ ಸಹಯೋಗದಲ್ಲಿ ಸ್ಥಾಪನೆ.
ರೇಷ್ಮೆ ಬೆಳೆ ವಿಸ್ತರಿಸಲು 55 ಕೋಟಿ ರೂ. ಅನುದಾನ.


ಪಶುಸಂಗೋಪನೆ : ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿ.
2025-26 ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ.
100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ ನಬಾರ್ಡ್ ಸಹಯೋಗದಲ್ಲಿ ನಿರ್ಮಾಣ.
ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ.


Spread the love
Share:

administrator

Leave a Reply

Your email address will not be published. Required fields are marked *