Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯ ರಾಜಕಾರಣದಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: “ಸಿದ್ದರಾಮಯ್ಯ ಮತ್ತು ನನ್ನ ಮಧ್ಯೆ ಒಪ್ಪಂದ ನಡೆದಿದೆ; ಅದರಂತೆಯೇ ನಡೆಯುತ್ತೇವೆ!”

Spread the love

ಕಾರವಾರ: ನನ್ನ ಮತ್ತು ಸಿದ್ದರಾಮಯ್ಯ (Siddaramaiah) ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ, ನಾನು ಯಾವತ್ತೂ ಐದು ವರ್ಷ ಇರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್ (High Command) ನಿರ್ಧಾರ ಆಗಿದೆ. ಹೈಕಮಾಂಡ್ ಸಿಎಂ ಪರವಾಗಿ ಇದ್ದದ್ದಕ್ಕೆ ಅವರು ಸಿಎಂ ಆಗಿದ್ದಾರೆ ಎಂದರು.

5 ವರ್ಷದ ಹಿಂದೆ ಈ ಸ್ಥಳಕ್ಕೆ ಬಂದು ಕುಟುಂಬದ ಕೆಲಸಕ್ಕೆ ಪ್ರಾರ್ಥನೆ ಮಾಡಿದ್ದು ಅದು ಈಡೇರಿದೆ. ಮತ್ತೆ ಇಲ್ಲಿಗೆ ಬರುತ್ತೇನೆ ಎಂದಿದ್ದೆ ಬಂದಿದ್ದೇನೆ. ಮತ್ತೆ ಆಶಿರ್ವಾದ ಮಾಡು ತಾಯಿ ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದರು

ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆಗೆ, ಅದು ಎಲ್ಲವೂ ನಿಮ್ಮಲ್ಲಿ ಚರ್ಚೆ ಆಗುತ್ತಿದೆ ಎಂದು ಮುಗುಳುನಕ್ಕು ಡಿಸಿಎಂ ತೆರಳಿದರು.

ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ, ಎರಡೂವರೆ ವರ್ಷ ಸಿಎಂ ಎಂದು ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರುತ್ತೇನೆ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಫುಲ್ ಟರ್ಮ್ ಸಿಎಂ ನಾನು ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದರು.

ಈ ಅಸ್ತ್ರ ಪ್ರಯೋಗದ ಬೆನ್ನಲ್ಲೇ ಡಿಕೆಶಿ ಒಪ್ಪಂದ ನಡೆದಿದೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.  ಇಲ್ಲಿಯವರೆಗೆ ಮಾಧ್ಯಮಗಳು ಸಾಕಷ್ಟು ಬಾರಿ ಒಪ್ಪಂದದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಯಾರೂ ಡಿಸಿಎಂ ಮತ್ತು ಸಿದ್ದರಾಮಯ್ಯ ಉತ್ತರ ನೀಡಿರಲಿಲ್ಲ. ಆದರೆ ಮೊದಲ ಬಾರಿಗೆಎ ಡಿಕೆಶಿ ಒಪ್ಪಂದ ನಡೆದಿದೆ ಎಂದು ಹೇಳುವ ಮೂಲಕ ಕುರ್ಚಿ ಕಿತ್ತಾಟಕ್ಕೆ ಟ್ವಸ್ಟ್‌ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *