Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಂತಿ ಪೂಜೆ, ಹೋಮ

Spread the love

ಬೆಂಗಳೂರು : ಕಾಲ್ತುಳಿತ ದುರಂತ ಪ್ರಕರಣದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಹಾಪೂಜೆ ನಡೆಸಲಾಗುತ್ತಿದೆ.

ಹೌದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ, ಹವನ ನಡೆಸಲಾಗುತ್ತಿದೆ. ಸ್ಟೇಡಿಯಂನಲ್ಲಿ ಸುದರ್ಶನ ನವಗ್ರಹ, ಗಣಪತಿ ಪೂಜೆ ಮಾಡಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಮೈದಾನದಲ್ಲಿ ಪೂಜೆ ನಡೆಸಲಾಗಿದೆ. 6 ಜನರ ಪುರೋಹಿತರಿಂದ ಹೋಮ, ಹವನ ನಡೆಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್ಸಿಎ ಅವರು ಕೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *