Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಾವಣಗೆರೆಯಲ್ಲಿ ಬೃಹತ್ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೂಡಿಕೆಯ ಹೆಸರಲ್ಲಿ 76.48 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

Spread the love

ದಾವಣಗೆರೆ: ನಗರದ (Davanagere) ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು (Cyber Crime) 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು ಈ ಕೃತ್ಯ ಎಸಗಿದ್ದಾರೆ.

ವಂಚನೆಗೊಳಗಾದ ವ್ಯಕ್ತಿಗೆ ಫೇಸ್‍ಬುಕ್ ಮೂಲಕ ಪರಿಚಯವಾದ ವಂಚಕ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ಹುಟ್ಟಿಸಿದ್ದ. ವಂಚಕನ ಮಾತು ನಂಬಿ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ವಿವಿಧ ಬ್ಯಾಂಕ್‌ಗಳಿಂದ ಹಣ ವರ್ಗಾವಣೆ ಮಾಡಲಾಗಿತ್ತು

ಕೆಲ ದಿನಗಳ ಕಾಲ ಬಿಟ್ಟು ಹಣ ವಾಪಸ್‌ ಪಡೆಯಲು ಹೋದಾಗ ಹಣ ಬಾರದೇ ಇದ್ದಾಗ ವಂಚನೆ ಜಾಲಕ್ಕೆ ಸಿಲುಕಿದ್ದು ಗೊತ್ತಾಗಿದೆ. ವಂಚನೆಗೊಳಗಾಗಿದ್ದು ಗೊತ್ತಾಗುತ್ತಿದ್ದಂತೆ ದಾವಣಗೆರೆ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 


Spread the love
Share:

administrator

Leave a Reply

Your email address will not be published. Required fields are marked *