Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಆರೋಪಿ ಸೆರೆ

Spread the love

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *