ಹೊಸ ವರ್ಷದ ಗಿಫ್ಟ್: ತಡರಾತ್ರಿ 2 ಗಂಟೆಯವರೆಗೂ ಬಿಎಂಟಿಸಿ ಬಸ್ ಸಂಚಾರ; ಎಲ್ಲೆಲ್ಲಿಗೆ ವ್ಯವಸ್ಥೆ ಇಲ್ಲಿದೆ ಡಿಟೇಲ್ಸ್!

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್‍ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.


ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಹೆಚ್ಚುವರಿ ಬಸ್ ಓಡಾಟ ಮಾಡಲಿವೆ. ಪ್ರಯಾಣಿಕರ ಬೇಡಿಕೆಗೆ ಅನುಸಾರ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಎಲೆಕ್ಟ್ರಾನಿಕ್ಸ್ ಸಿಟಿ ಪೂರ್ವ, ಜಿಗಣಿ, ಸರ್ಜಾಪುರ, ಕೆಂಗೇರಿ ಕೆಹೆಚ್‍ಬಿ ಕ್ವಾಟರ್ಸ್, ಜನಪ್ರಿಯ ಟೌನ್ ಶಿಪ್, ನೆಲಮಂಗಲ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ, ಜೀವನ್ ಭೀಮಾನಗರ ಸೇರಿ ಹಲವೆಡೆ ಬಸ್ ಸಂಚರಿಸಲಿವೆ.