Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮತ್ತೆ ಅಟ್ಟಹಾಸ: ಉದ್ಯಮಿಗೆ ಇರಿದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

Spread the love

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ (Hindu) ಮೇಲಿನ ದಾಳಿಗಳ ಸರಣಿ ಮುಂದುವರಿದಿದೆ. ಉದ್ಯಮಿ ಕೊಂಕನ್ ಚಂದ್ರ (40) ಎಂಬವರು ಪವಾಡ ಸದೃಶವಾಗಿ ಜೀವ ಉಳಿಸಿಕೊಂಡಿದ್ದಾರೆ.

ಕೇಔರ್‌ಬಂಗಾ ಪ್ರದೇಶದಲ್ಲಿ ಫಾರ್ಮಸಿ ಮುಚ್ಚಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆ ಕಡೆ ಬರುತ್ತಿದ್ದ ಕೊಂಕನ್ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲವು ಬಾರಿ ಹೊಟ್ಟೆಗೆ ಇರಿದು, ಪೆಟ್ರೋಲ್‌ಹಾಕಿ ಬೆಂಕಿ ಹಚ್ಚಿದ್ದಾರೆ.

ದೃಷ್ಟವಶಾತ್ ಪಕ್ಕದಲ್ಲೇ ಇದ್ದ ನೀರಿದ್ದ ಹಳ್ಳವೊಂದಕ್ಕೆ ಜಿಗಿದ ಕೊಂಕನ್ ಪ್ರಾಣ ಉಳಿಸಿಕೊಂಡಿದ್ದಾರೆ. ನಂತರ ಕೆಲ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಂಕನ್ ಪರಿಸ್ಥಿತಿ ತುಂಬಾ ಗಂಭೀರವಾಗಿದ್ದು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು. ನನ್ನ ಪತಿ ಸರಳ ವ್ಯಕ್ತಿಯಾಗಿದ್ದುಅವರು ಯಾರಿಗೂ ಹಾನಿ ಮಾಡಿಲ್ಲ. ಅವರು ಯಾರಿಗೂ ನೋವುಂಟು ಮಾಡಿಲ್ಲ ಎಂದು ಕೊಂಕನ್‌ ಅವರ ಪತ್ನಿ ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಎರಡು ವಾರಗಳಲ್ಲಿ ಹಿಂದೂಗಳ ಮೇಲೆ ನಡೆದ ನಡೆದ ನಾಲ್ಕನೇ ದಾಳಿ ಇದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *